HomeGadag Newsಗಾಲಾ ನರ್ಸಿಂಗ್ ಕಾಲೇಜಿನಲ್ಲಿ ರಕ್ತದಾನಿಗಳ ದಿನ ಆಚರಣೆ

ಗಾಲಾ ನರ್ಸಿಂಗ್ ಕಾಲೇಜಿನಲ್ಲಿ ರಕ್ತದಾನಿಗಳ ದಿನ ಆಚರಣೆ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ : ಇಲ್ಲಿನ ವಿ.ಪಿ. ಗಾಲಾ ಸ್ಕೂಲ್ ಆಫ್ ನರ್ಸಿಂಗ್ ಹಾಗೂ ಇನ್ಸ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಸೈನ್ಸ್ನಲ್ಲಿ ವಿಶ್ವ ರಕ್ತದಾನಿಗಳ ದಿನವನ್ನು ಆಚರಿಸಲಾಯಿತು.

ಕಾರ್ಯಕ್ರಮ ಉದ್ದೇಶಿಸಿ ಪ್ರಾಂಶುಪಾಲ ಅಮರಯ್ಯ ಚಿನ್ನಯ್ಯನಮಠ ಮಾತನಾಡಿ, ದಾನಗಳಲ್ಲಿ ರಕ್ತದಾನವನ್ನು ಶ್ರೇಷ್ಠ ದಾನವೆಂದು ಕರೆಯಲಾಗುತ್ತಾದೆ. ಈ ಹಿನ್ನೆಲೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಪ್ರತಿ ವರ್ಷ ಜೂನ್ 14ರಂದು ವಿಶ್ವ ರಕ್ತದಾನಿಗಳ ದಿನವನ್ನಾಗಿ ಘೋಷಿಸಿದೆ. ಈ ಜೀವ ಉಳಿಸುವ ಕಾರ್ಯವಿಧಾನದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ರಕ್ತದಾನವನ್ನು ಉತ್ತೇಜಿಸಲಾಗುತ್ತದೆ ಎಂದರು.

ಮಾನವನ ಜೀವವನ್ನು ಉಳಿಸುವಲ್ಲಿ ರಕ್ತದಾನವು ಒಂದು ಪ್ರಮುಖ ಕಾರ್ಯವಿಧಾನವಾಗಿದೆ. ಇದೊಂದು ಮಹತ್ತರವಾದ ಉಪಕ್ರಮವಾಗಿದ್ದು, ಎಲ್ಲೆಡೆ ಪ್ರೋತ್ಸಾಹ ನೀಡಬೇಕು ಎಂದರು. ಕಾರ್ಯಕ್ರಮದಲ್ಲಿ ಕಾಲೇಜಿನ ಅಧ್ಯಕ್ಷೆ ರಚನಾ ಗಾಲಾ, ಸೆಕ್ರೆಟರಿ ಪಂಕಜ್ ಗಾಲಾ, ನಿರ್ದೇಶಕರಾದ ಗುಂಜನ ಗಾಲಾ, ಕಾಲೇಜಿನ ಎಲ್ಲ ಸಿಬ್ಬಂದಿ ವರ್ಗ, ಎಲ್ಲ ವಿದ್ಯಾರ್ಥಿಗಳು ಭಾಗವಹಿಸಿದ್ದರು.


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!