ವಿಜಯಸಾಕ್ಷಿ ಸುದ್ದಿ, ಗದಗ : ನಗರದ ಬಾಲ ವಿನಾಯಕ ವಿದ್ಯಾನಿಕೇತನ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ಮತ್ತು ಅಂತಾರಾಷ್ಟ್ರೀಯ ಸಂಗೀತ ದಿನಾಚರಣೆಯನ್ನು ಆಚರಿಸಲಾಯಿತು.
Advertisement
ಶಾಲೆಯ ನಿರ್ದೇಶಕ ವಿನಾಯಕ ಆರ್, ಪ್ರಾಚಾರ್ಯ ವಿ.ಎಂ. ಅಡ್ನೂರ, ಉಪ ಪ್ರಾಚಾರ್ಯ ಪಿ.ಜಿ. ಬ್ಯಾಳಿ, ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಾಲೆಯ ಯೋಗ ಶಿಕ್ಷಕ ಕೆ.ಐ. ಮುಲ್ಲಾ ವಿದ್ಯಾರ್ಥಿಗಳಿಗೆ ಯೋಗದ ಮಹತ್ವವನ್ನು ತಿಳಿಸಿ, ವಿದ್ಯಾರ್ಥಿಗಳಿಗೆ ವಿವಿಧ ಯೋಗಾಸನದ ಭಂಗಿಗಳನ್ನು ಮಾಡಿಸಿದರು.
ಪ್ರಗತಿ ಮಾಳಶೆಟ್ಟಿ ಮತ್ತು ಸಂಗಡಿಗರು ಶಾಸ್ತ್ರೀಯ ಸಂಗೀತವನ್ನು ಹಾಡಿದರು. ಅಕ್ಷತಾ ಪಾಟೀಲ್ ಯೋಗ ಮತ್ತು ಸಂಗೀತ ಕುರಿತು ಭಾಷಣ ಮಾಡಿದಳು. ಅನುಷಾ ತಿಮ್ಮಾಪೂರ್ ನಿರೂಪಿಸಿ ವಂದಿಸಿದರು.