ಯೋಗಾಭ್ಯಾಸವನ್ನು ಮೈಗೂಡಿಸಿಕೊಳ್ಳಿ : ಬೆನಕನವಾರಿ

0
International Yoga Day
Spread the love

ವಿಜಯಸಾಕ್ಷಿ ಸುದ್ದಿ, ಗದಗ : ನಗರದ ಕೆ.ವ್ಹಿ.ಎಸ್.ಆರ್. ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯ, ಕೆ.ಎಸ್.ಎಸ್. ಪದವಿ ಮಹಾವಿದ್ಯಾಲಯ, ಸಂಕೇತ ಪದವಿಪೂರ್ವ ಮಹಾವಿದ್ಯಾಲಯ ಹಾಗೂ ರಾಷ್ಟ್ರೀಯ ಸ್ವಯಂ ಸೇವಾ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು.

Advertisement

ಕನಕದಾಸ ಶಿಕ್ಷಣ ಸಮಿತಿಯ ಜಂಟಿ ಕಾರ್ಯದರ್ಶಿ ಡಾ. ಪುನೀತಕುಮಾರ ಬೆನಕನವಾರಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ದಿನನಿತ್ಯ ಯೋಗವನ್ನು ಮಾಡುವುದರಿಂದ ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜೊತೆಗೆ ಮಾನಸಿಕ ಸ್ಥಿತಿಯನ್ನು ಹತೋಟಿಯಲ್ಲಿ ಇಟ್ಟುಕೊಳ್ಳಬಹುದು. ಇಂದಿನ ಯೋಗ ತರಬೇತಿಯನ್ನು ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕೆಂದು ಕರೆ ನೀಡಿದರು.

ಯೋಗ ತರಬೇತಿಯನ್ನು ಆಕಾಶ ಗುಡ್ಡದೇವರಮಠ ಹಾಗೂ ಸಂಗಡಿಗರು ನೆರವೇರಿಸಿಕೊಟ್ಟರು.

ಕಾರ್ಯಕ್ರಮದಲ್ಲಿ ಕೆ.ವ್ಹಿ.ಎಸ್.ಆರ್. ಕಾಲೇಜಿನ ಪ್ರಾಚಾರ್ಯ ಉಮೇಶ ಹಿರೇಮಠ, ಕೆ.ಎಸ್.ಎಸ್. ಪದವಿ ಕಾಲೇಜಿನ ಪ್ರಾಚಾರ್ಯ ಡಾ. ಡಿ.ಬಿ. ಗವಾನಿ, ಪದವಿ ಕಾಲೇಜಿನ ಉಪ ಪ್ರಾಚಾರ್ಯ ಪ್ರೊ. ಪಿ.ಸಿ. ಜಂಪಣ್ಣನವರ, ಪದವಿ ಕಾಲೇಜಿನ ಎನ್.ಎಸ್.ಎಸ್. ಅಧಿಕಾರಿ ಎಸ್.ಬಿ. ಪಲ್ಲೇದ, ಸಮಸ್ತ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಹಾಜರಿದ್ದರು. ಎನ್.ಎಸ್.ಎಸ್. ಕಾರ್ಯಕ್ರಮ ಅಧಿಕಾರಿ ಪ್ರದೀಪ ಜಿ.ನಾಯಕ ಸ್ವಾಗತಿಸಿದರು. ಎನ್.ಎಸ್.ಎಸ್. ವಿದ್ಯಾರ್ಥಿನಿ ಅನಿತಾ ಬಡಿಗೇರ ನಿರೂಪಿಸಿದರು. ದೈಹಿಕ ಉಪನ್ಯಾಸಕ ರಮೇಶ ಗಂಗಪುತ್ರ ವಂದಿಸಿದರು.


Spread the love

LEAVE A REPLY

Please enter your comment!
Please enter your name here