HomeGadag Newsಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಸೂಚನೆ

ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಸೂಚನೆ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ : ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಕೆ. ಪಾಟೀಲ ಅವರು ಮಂಗಳವಾರ ಸಾಯಂಕಾಲ ನಗರದ ಕಾಟನ ಸೇಲ್ ಸೊಸೈಯಟಿಲ್ಲಿ ಆವರಣದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು.

ಸಾರ್ವಜನಿಕರಿಂದ ಶಾಂತ ಚಿತ್ತದಿಂದಲೇ ಅಹವಾಲುಗಳನ್ನು ಸ್ವೀಕರಿಸಿದ ಸಚಿವರು, ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಕೂಡಲೇ ಸಮಸ್ಯೆ ಪರಿಹಾರಕ್ಕಾಗಿ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

ಸಾರ್ವಜನಿಕರು ಅನಾರೋಗ್ಯದ ಕಾರಣ ಶಸ್ತçಚಿಕಿತ್ಸೆಗೆ ಸಹಾಯ ಕೋರಿ ಅಹವಾಲು ತೋಡಿಕೊಂಡರು. ಇದಕ್ಕೆ ಸ್ಪಂದಿಸಿದ ಸಚಿವ ಎಚ್.ಕೆ. ಪಾಟೀಲರು ಪರಿಹಾರ ನೀಡುವ ಕುರಿತು ಭರವಸೆ ನೀಡಿದರು.

ಸಾರ್ವಜನಿಕ ಕುಂದು ಕೊರತೆಗಳ ವಿಚಾರಣೆಯಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ, ಬಿ.ಬಿ. ಅಸೂಟಿ, ಅಶೋಕ ಮಂದಾಲಿ, ಪ್ರಭು ಬುರಬುರೆ, ಕೃಷ್ಣಾ ಪರಾಪುರ ಮುಂತಾದವರು ಉಪಸ್ಥಿತರಿದ್ದರು.

District In-charge Minister H.K. Acceptance of public complaints by Patil

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ, ತಹಸೀಲ್ದಾರ ಶ್ರೀನಿವಾಸ ಮೂರ್ತಿ ಕುಲಕರ್ಣಿ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಎ.ಎ. ಕಂಬಾಳಿಮಠ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಬಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪಿ.ವೈ. ಶೆಟ್ಟೆಪ್ಪನವರ, ಬಿಸಿಎಂ ಜಿಲ್ಲಾ ಅಧಿಕಾರಿ ರವಿ ಗುಂಜಿಕರ, ಡಿಎಸ್‌ಓ ಡಾ. ವೆಂಕಟೇಶ ರಾಠೋಡ, ಡಿಡಿಪಿಐ ಎಂ.ಎ. ರಡ್ಡೇರ, ಆಹಾರ ಇಲಾಖೆ ಉಪನಿರ್ದೇಶಕ ಎಂ. ಗಂಗಪ್ಪ, ಆರ್.ಟಿ.ಒ ಮಂಜುನಾಥ ಶೀರಾಳೆ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾರ್ವಜನಿಕರು, ಗಣ್ಯರು ಹಾಜರಿದ್ದರು.

ದೇವಸ್ಥಾನದ ಗೋಪುರ ನಿರ್ಮಾಣಕ್ಕೆ ಅನುದಾನ, ಬಡಾವಣೆಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಮನವಿ ಸೇರಿದಂತೆ ಸಾರ್ವಜನಿಕರಿಂದ ಸಾಮೂಹಿಕ ಹಾಗೂ ವಯಕ್ತಿಕ ಅಹವಾಲುಗಳನ್ನು ಸ್ವೀಕರಿಸಿ, ತಕ್ಷಣ ಪರಿಹಾರ ಕಲ್ಪಿಸುವಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಸೂಚಿಸಿದರು.

LEAVE A REPLY

Please enter your comment!
Please enter your name here

E-Paper

E-paper

Must Read

spot_img