ಕೆಂಪೇಗೌಡರ ಆದರ್ಶಗಳು ಎಲ್ಲರಿಗೂ ದಾರಿದೀಪ : ವೈಶಾಲಿ ಎಂ.ಎಲ್

0
Nadaprabhu Shri Kempegowda Jayanti Program
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಬೆಂಗಳೂರು ನಗರವನ್ನು ಅರ್ಥಪೂರ್ಣವಾಗಿ ಕಟ್ಟುವಲ್ಲಿ ಕೆಂಪೇಗೌಡರ ಕೊಡುಗೆ ಮಹತ್ವದ್ದಾಗಿದೆ ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಅಭಿಪ್ರಾಯಪಟ್ಟರು.

Advertisement

ಗದಗ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಗುರುವಾರ ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಕೆಂಪೇಗೌಡ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.

ನಾಡಪ್ರಭು ಕೆಂಪೇಗೌಡರು ಸುಭದ್ರವಾದ ಬೆಂಗಳೂರು ನಿರ್ಮಾಣದ ಜೊತೆಯಲ್ಲಿಯೇ ಜನಪರ ಕಾರ್ಯಗಳನ್ನು ಕೈಗೊಂಡರು ಎಂದರು.

ಬಾಲ್ಯದಲ್ಲಯೇ ಚುರುಕಾಗಿದ್ದ ಕೆಂಪೇಗೌಡ ಅವರು ಗುರುಕುಲದಲ್ಲಿ ಸಾಮಾನ್ಯ ಶಿಕ್ಷಣದ ಜೊತೆಗೆ ರಾಜನೀತಿ, ಆರ್ಥಿಕ ತಿಳುವಳಿಕೆ, ಕುಸ್ತಿ, ಯುದ್ಧ ಕಲೆಗಳನ್ನು ಕಲಿತಿದ್ದರು. ವಿಜಯನಗರದ ಧಾರ್ಮಿಕ ಮತ್ತು ಸಾಂಸ್ಕೃತಿಕ ಸಿರಿಯನ್ನು ಕಣ್ಣಾರೆ ಕಂಡಿದ್ದ ಕೆಂಪೇಗೌಡರಿಗೆ ಎಲ್ಲ ವೈಭವಗಳನ್ನು ಪುನರ್ ಪ್ರತಿಷ್ಠಾಪಿಸುವ ಬಯಕೆ ಇತ್ತು. ಅವರು ರಾಜಧಾನಿ ಕಟ್ಟಿದ ನಂತರ ಅಲ್ಲಿ 4 ಮಹಾದ್ವಾರಗಳನ್ನು ರಚಿಸಿದರು.

ವ್ಯಾಪಾರಿಗಳಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿಕೊಟ್ಟು. ಅವರ ವೃತ್ತಿಗಳಿಗನುಸಾರವಾಗಿ ಅಕ್ಕಿಪೇಟೆ, ರಾಗಿ ಪೇಟೆ, ಕುಂಬಾರ ಪೇಟೆ, ಉಪ್ಪಾರ ಪೇಟೆ, ಬಳೆ ಪೇಟೆ ಹೀಗೆ ಅನೇಕ ಪೇಟೆಗಳನ್ನು ನಿರ್ಮಿಸಿಕೊಟ್ಟರು ಎಂದು ತಿಳಿಸಿದರು.

ನಾಡಪ್ರಭು ಕೆಂಪೇಗೌಡ ಅವರ ಸಾಧನೆಗಳನ್ನು ಮೆಲುಕು ಹಾಕುವುದು ಇಂದಿನ ಅವಶ್ಯಕತೆಯಾಗಿದೆ. ಅವರ ಆದರ್ಶಗಳು ಇಂದು ಎಲ್ಲರಿಗೂ ದಾರಿದೀಪವಾಗಿವೆ ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಅವರು ಹೇಳಿದರು.

ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಅಕಬರಸಾಬ ಬಬರ್ಜಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಬಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್. ನೀಲಗುಂದ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.

ನಾಡಪ್ರಭು ಕೆಂಪೇಗೌಡರು ಉತ್ತಮ ಕೃಷಿ ಚಟುವಟಿಕೆಗಳಿಗೆ ಹಾಗೂ ಗೃಹ ಬಳಕೆಗಾಗಿ ವಿವಿಧ ಕೆರೆಗಳನ್ನು ಕಟ್ಟಿಸಿದರು. ಧಾರ್ಮಿಕ ಪ್ರತೀಕವಾಗಿ ದೇವಸ್ಥಾನಗಳನ್ನು ಕಟ್ಟಿಸಿದರು. ವಿವಿಧ ಉದ್ಯಾನವನಗಳನ್ನು ನಿರ್ಮಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಬೆಂಗಳೂರನ್ನು ಜಾಗತಿಕವಾಗಿ ಗುರುತಿಸಲು ಕೆಂಪೇಗೌಡರ ಕೊಡುಗೆಯು ಅವಿಸ್ಮರಣೀಯವಾಗಿದ್ದು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಅಭಿಪ್ರಾಯಪಟ್ಟರು.


Spread the love

LEAVE A REPLY

Please enter your comment!
Please enter your name here