ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ರಜೆ ಅವಧಿಯಲ್ಲಿ ಮತಗಟ್ಟೆ ಹಂತದ ಅಧಿಕಾರಿ ಬಿಎಲ್‌ಓ ಆಗಿ ಕೆಲಸ ನಿರ್ವಹಿಸಿದ ಶಿಕ್ಷಕರಿಗೆ ಗಳಿಕೆ ರಜೆ ಮಂಜೂರು ಮಾಡುವ ಕುರಿತು ಆದೇಶ ನೀಡವಂತೆ ತಹಸೀಲ್ದಾರಿಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹಾಗೂ ಸರ್ಕಾರಿ ನೌಕರ ಸಂಘದ ತಾಲೂಕು ಘಟಕಗಳ ವತಿಯಿಂದ ಶನಿವಾರ ಮನವಿ ಅರ್ಪಿಸಲಾಯಿತು.
Advertisement
ಈ ಸಂದರ್ಭದಲ್ಲಿ ನೌಕರರ ಸಂಘದ ಅಧ್ಯಕ್ಷ ಡಿ.ಎಚ್. ಪಾಟೀಲ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಎಸ್. ಹರ್ಲಾಪೂರ, ಪ್ರಧಾನ ಕಾರ್ಯದರ್ಶಿಗಳಾದ ಚಂದ್ರು ನೇಕಾರ ಹಾಗೂ ಎಮ್.ಎ. ನದಾಫ್, ಡಿ.ಡಿ. ಲಮಾಣಿ, ಎಲ್.ಎನ್. ನಂದೆಣ್ಣವರ, ಗೀತಾ ಹಳ್ಯಾಳ, ಬಿ.ಬಿ. ಯತ್ತಿನಹಳ್ಳಿ, ಪಿ.ಪಿ. ಹಿರೇಮಠ, ಗುರುರಾಜ ಹವಳದ ಹಾಜರಿದ್ದರು.
ಉಪ ತಹಸೀಲ್ದಾರ ಪ್ರಶಾಂತ ಕಿಮಾಯಿ ಹಾಗೂ ಕಂದಾಯ ನಿರೀಕ್ಷಕ ಬಿ.ಎಂ. ಕಾತ್ರಾಳ ಮನವಿ ಸ್ವೀಕರಿಸಿ ಸೂಕ್ತ ಕ್ರಮಕ್ಕೆ ಮೇಲಾಧಿಕಾರಿಗಳಿಗೆ ತಿಳಿಸುವದಾಗಿ ಹೇಳಿದರು.