ವಿಜಯಸಾಕ್ಷಿ ಸುದ್ದಿ, ಗದಗ : ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಕಾನೂನುಬದ್ಧವಾಗಿ ಇದುವರೆಗೂ ಸಿಗುತ್ತಿದ್ದ ಸೌಲಭ್ಯಗಳು ಸಿಗುತ್ತಿಲ್ಲ. ಶೈಕ್ಷಣಿಕ ಸಹಾಯಧನ, ಮದುವೆ ಸಹಾಯಧನ, ವೈದ್ಯಕೀಯ ಪರಿಹಾರಕ್ಕೆ ಸಲ್ಲಿಕೆಯಾದ ಸಾವಿರಾರು ಅರ್ಜಿಗಳು ಕಳೆದ ಒಂದು ವರ್ಷದಿಂದ ಕೊಳೆಯುತ್ತಿವೆ. ಹೀಗಾಗಿ ಅವರ ಜೀವನ ಕಷ್ಟಕ್ಕೆ ಸಿಲುಕಿದೆ ಎಂದು ಕಲ್ಯಾಣ ಮಂಡಳಿ ಅನುಸರಿಸುತ್ತಿರುವ ಕಾರ್ಮಿಕ ವಿರೋಧಿ, ಬಡಜನ ವಿರೋಧಿ ನಡೆಯನ್ನು ಖಂಡಿಸಿ ಕಟ್ಟಡ ಕಾರ್ಮಿಕರು ಪ್ರತಿಭಟನೆ ನಡೆಸಿದರು.
ಇನ್ನಾದರೂ ಆಗಿರುವ ತಪ್ಪು ಸರಿಪಡಿಸಲು ಮುಂದಾಗಿ, ಸಮಸ್ಯೆಗಳನ್ನು ಇತ್ಯರ್ಥ ಮಾಡಬೇಕೆಂದು ಕಾರ್ಮಿಕರ ಮುಖಂಡರು ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆ ಅಧಿಕಾರಿಗಳನ್ನು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಮುತ್ತಪ್ಪ ಚಲವಾದಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾರುತಿ ಚಿಟಗಿ, ಜಿಲ್ಲಾ ಮುಖಂಡರುಗಳಾದ ಮಹಬೂಬ ಹವಾಲ್ದಾರ, ಕನಕಪ್ಪ ಹಾದಿಮನಿ, ಶಿವರಾಜ ವಸ್ತçದ, ಹನಮಂತ ಮಲ್ಲಾಡದ, ಅಸ್ಥಾರ ಗೋನಾಳ, ಕುಮಾರ ವಡ್ಡರ, ಮುದಕಪ್ಪ ವಡ್ಡರ, ಅಮಿತ ಪೂಜಾರ, ವಿನಾಯಕ ಪವಾರ, ಫಕೀರಪ್ಪ ಸಣ್ಣದನಿ, ಬಸಪ್ಪ ಬಾಳನ್ನವರ, ಫಕ್ರುಸಾಬ ನರಗುಂದ ಮುಂತಾದವರು ಉಪಸ್ಥಿತರಿದ್ದರು.