HomeGadag Newsಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ತಲುಪಿಸಿ

ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ತಲುಪಿಸಿ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ : ರಾಜ್ಯ ಸರ್ಕಾರದ ಮಹತ್ವದ ಗ್ಯಾರಂಟಿ ಯೋಜನೆಗಳು ಜನಪರ ಯೋಜನೆಗಳಾಗಿದ್ದು, ಇವುಗಳ ಅನುಷ್ಠಾನದಲ್ಲಿ ಕೆಲವು ತಾಂತ್ರಿಕ ದೋಷಗಳು ಎದುರಾಗುತ್ತಿವೆ. ಅವುಗಳನ್ನು ಶೀಘ್ರದಲ್ಲಿ ಪರಿಹರಿಸಿಬೇಕು ಎಂದು ರೋಣ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಮಿಥುನ ಪಾಟೀಲ್ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರೋಣ ತಾಲೂಕಿನ ತಹಸೀಲ್ದಾರ ಕಚೇರಿಯ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಜ್ಯ ಸರ್ಕಾರವು ಸರ್ವರಿಗೂ ಸಮಬಾಳು-ಸಮಪಾಲು ನೀಡುವ ಉದ್ದೇಶದಿಂದ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಗಳು ಸಾಮಾನ್ಯ ಜನರ ಆರ್ಥಿಕ ಸಬಲೀಕರಣಕ್ಕೆ ಸಹಕಾರಿಯಾಗಿದ್ದು, ಇವುಗಳು ಸಮರ್ಪಕವಾಗಿ ಅನುಷ್ಠಾನವಾಗುತ್ತಿವೆ. ತಾಂತ್ರಿಕ ದೋಷಗಳಿಂದಾಗಿ ಕೆಲವರಿಗೆ ಯೋಜನೆಗಳು ಸರಿಯಾಗಿ ತಲುಪುತ್ತಿಲ್ಲ. ಅದರಲ್ಲೂ ಗೃಹಲಕ್ಷ್ಮಿ ಯೋಜನೆಯಲ್ಲಿ ಮುಖ್ಯವಾಗಿ ತಾಂತ್ರಿಕ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಅಧಿಕಾರಿಗಳು ಈ ಸಮಸ್ಯೆಯನ್ನು ಬಗೆಹರಿಸಿ ಅರ್ಹ ಫಲಾನುಭವಿಗಳಿಗೆ ಯೋಜನೆಯ ಲಾಭವನ್ನು ದೊರಕಿಸಿಕೊಡಬೇಕು ಎಂದು ಹೇಳಿದರು.

ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದ ಅಧಿಕಾರಿಗಳು ತಾಲೂಕಿನ ಎಲ್ಲಾ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಬೇಕು. ಅಂಗಡಿಗಳಲ್ಲಿ ಕಡ್ಡಾಯವಾಗಿ ನಾಮಫಲಕ ಅಳವಡಿಸಬೇಕು ಹಾಗೂ ಪಡಿತರ ಕಾರ್ಡ್ನಲ್ಲಿರುವ ಪ್ರತಿ ಸದಸ್ಯರಿಗೆ ನೀಡುವ ಆಹಾರ ಸಾಮಾಗ್ರಿಗಳ ವಿವರವನ್ನು ಸಹ ಸೂಚನಾ ಫಲಕದಲ್ಲಿ ಅಳವಡಿಸಬೇಕು ಎಂದು ತಿಳಿಸಿದರು.

ಶಕ್ತಿ ಯೋಜನೆ, ಯುವನಿಧಿ ಯೋಜನೆಯ ಸಾಧನೆಗಳ ಅಂಕಿ ಅಂಶಗಳನ್ನು ಆಯಾ ಅಧಿಕಾರಿಗಳು ಸಭೆಗೆ ಮಂಡಿಸಿದರು. ಸಭೆಯಲ್ಲಿ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಕೆ. ಇನಾಮದಾರ ಸೇರಿದಂತೆ ರೋಣ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯರು ಹಾಗೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

E-Paper

E-paper

Must Read

spot_img