ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ : ಟಿ. ಶ್ಯಾಮ್ ಭಟ್

0
A surprise visit by the Chairperson of the Human Rights Commission
Spread the love

ವಿಜಯಸಾಕ್ಷಿ ಸುದ್ದಿ, ಗದಗ : ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಟಿ. ಶ್ಯಾಮ್ ಭಟ್ ಹಾಗೂ ಸದಸ್ಯರ ತಂಡದಿಂದ ಗದಗ ನಗರದ ಲಕ್ಷ್ಮೇಶ್ವರ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ಬಾಲಕರ ವಸತಿ ನಿಲಯ ಹಾಗೂ ಕಳಸಾಪುರ ರಸ್ತೆಯಲ್ಲಿರುವ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Advertisement

ವಸತಿ ನಿಲಯಗಳಲ್ಲಿನ ಮೂಲಭೂತ ಸೌಕರ್ಯಗಳ ಬಗ್ಗೆ ವೀಕ್ಷಣೆ ನಡೆಸಿದ ಅಧ್ಯಕ್ಷರು, ನಿಲಯದ ಮಕ್ಕಳೊಂದಿಗೆ ವಸತಿ ನಿಲಯದ ಊಟ, ಕುಡಿಯುವ ನೀರಿನ ವ್ಯವಸ್ಥೆ ಕುರಿತು ವಿಚಾರಣೆ ನಡೆಸಿದರು. ವಸತಿ ನಿಲಯದ ಅಡುಗೆ ಕೊಠಡಿ, ಗ್ರಂಥಾಲಯ, ಶೌಚಾಲಯ ಪರಿಶೀಲಿಸಿ ಸ್ವಚ್ಛತೆಗೆ ಆದ್ಯತೆ ನೀಡುವಂತೆ ನಿಲಯದ ಪಾಲಕರಿಗೆ ಸೂಚನೆ ನಿಡಿದರು.

ಬೆಟಗೇರಿಯ ಗಾಂಧಿ ನಗರದಲ್ಲಿನ ಜಿಲ್ಲಾ ಕಾರಾಗೃಹಕ್ಕೆ ಭೇಟಿ ನೀಡಿ ವ್ಯವಸ್ಥೆಯ ಪರಿಶೀಲನೆ ನಡೆಸಿದ ಅವರು, ಜೈಲಿನಲ್ಲಿರುವ ವಿಚಾರಾಣಾಧೀನ ಕೈದಿಗಳ ಮೂಲಭೂತ ಹಕ್ಕುಗಳ ಲಭ್ಯತೆ ಬಗ್ಗೆ ಮಾಹಿತಿ ಪಡೆದರು. ನಂತರ ಕಾರಾಗೃಹದಲ್ಲಿನ ಅಡುಗೆ ಕೋಣೆ, ವರಾಂಡಾ ಸೇರಿದಂತೆ ಹಲವೆಡೆ ಖುದ್ದಾಗಿ ಭೇಟಿ ನೀಡಿ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು. ವಿಚಾರಣಾಧಿನ ಕೈದಿಗಳಿಗೆ ನೀಡುವ ಉಪಹಾರ, ಊಟ, ಕುಡಿಯುವ ನೀರಿನ ಗುಣಮಟ್ಟದ ಕುರಿತು ಚರ್ಚಿಸಿದ ಅವರು ಕೋರ್ಟಿಗೆ ಹಾಜರುಪಡಿಸಿದ ಸಂದರ್ಭದಲ್ಲಿ ವಕೀಲರನ್ನು ನೇಮಿಸಿದ ಬಗ್ಗೆ ಹಾಗೂ ಬೇಲ್ ನೀಡುವ ಬಗ್ಗೆ ನ್ಯಾಯಾಧೀಶರಲ್ಲಿ ಮನವಿ ಮಾಡುವಂತೆಯೂ ತಿಳಿಸಿದರು.

A surprise visit by the Chairperson of the Human Rights Commission

ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಬಿ. ಸಂಕದ, ಉಪವಿಭಾಗಾಧಿಕಾರಿ ಡಾ.ವೆಂಕಟೇಶ ನಾಯ್ಕ, ಜಿ.ಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ರವಿ ಗುಂಜೀಕರ್, ವಾರ್ತಾಧಿಕಾರಿ ವಸಂತ ಮಡ್ಲೂರ ಸೇರಿದಂತೆ ವಿವಿಧ ಅಧಿಕಾರಿಗಳು ಹಾಜರಿದ್ದರು.

ಜಿಲ್ಲಾ ಕೇಂದ್ರ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಪ್ರಯಾಣಿಕರ ಕುಂದುಕೊರತೆಗಳನ್ನು ಆಲಿಸಿದ ಅವರು, ನಿಲ್ದಾಣದಲ್ಲಿ ಮೂಲಭೂತ ಸೌಕರ್ಯಗಳ ಲಭ್ಯತೆ ಕುರಿತು ಸಾರಿಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಸೂಕ್ತ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ತಿಳಿಸಿದರು. ಆಯೋಗದ ಸದಸ್ಯರಾದ ಎಸ್.ಕೆ. ವಂಟಿಗೋಡಿ, ಕಾರ್ಯದರ್ಶಿ ಎ.ದಿನೇಶ್ ಸಂಪತ್ ರಾಜ್, ಆಪ್ತ ಕಾರ್ಯದರ್ಶಿ ಅರುಣ ಪೂಜಾರ ಜೊತೆಗಿದ್ದರು.


Spread the love

LEAVE A REPLY

Please enter your comment!
Please enter your name here