ಹುಬ್ಬಳ್ಳಿ: ಆನ್ಲೈನ್ ಗೇಮಿಂಗ್ ವ್ಯಾಮೋಹಕ್ಕೆ ವಿದ್ಯಾರ್ಥಿಯೊಬ್ಬ ವಸತಿ ನಿಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿರುವ ಘಟನೆ ಹುಬ್ಬಳ್ಳಿಯ ಶಿರಡಿ ನಗರದಲ್ಲಿ ನಡೆದಿದೆ. ರಾಕೇಶ್ ಶ್ರೀಶೈಲ್ ಜಂಬಲದಿನ್ನಿ(21) ಮೃತ ವಿದ್ಯಾರ್ಥಿಯಾಗಿದ್ದು, ಶಿರಡಿ ನಗರದಲ್ಲಿರುವ ವಸತಿ ನಿಲಯದಲ್ಲಿ ವಾಸವಿದ್ದ ರಾಕೇಶ್ ಬಿವಿಬಿ ಕಾಲೇಜಿನಲ್ಲಿ ಬಿಇ 6ನೆ ಸೆಮಿಸ್ಟರ್ ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದನು.
Advertisement
ರಾಕೇಶ್ ನಿತ್ಯ ಆನ್‌ಲೈನ್ ಗೇಮ್ ಆಡ್ತಿದ್ದ ಎಂಬ ಮಾಹಿತಿಯಿದ್ದು, ಆನ್ ಲೈನ್ ಗೇಮ್ ನಲ್ಲಿ ಹಣವನ್ನು ಕಳೆದುಕೊಂಡಿದ್ದನು. ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬ ಶಂಕೆಯಾಗಿದೆ. ಇನ್ನೂ ಘಟನೆ ಸಂಬಂಧ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.