ಬೆಂಗಳೂರು: ಬೆದರಿಕೆ ಹಾಗೂ ಸುಲಿಗೆ ಯತ್ನ ಪ್ರಕರಣದಲ್ಲಿ ಕನ್ನಡ ಸುದ್ದಿವಾಹಿನಿ ಮಾಜಿ ನಿರೂಪಕಿ, ‘ಗಿಚ್ಚಿ ಗಿಲಿಗಿಲಿ’ ಶೋ ಸ್ಪರ್ಧಿ ದಿವ್ಯಾ ವಸಂತ ಹೆಸರು ಕೇಳಿಬಂದಿದ್ದು, ಈ ಸಂಬಂಧ ತಲೆಮರೆಸಿಕೊಂಡಿದ್ದ ದಿವ್ಯಾ ವಸಂತ ಕೊನೆಗೂ ಅರೆಸ್ಟ್ ಆಗಿದ್ದಾಳೆ. ಜೆ. ಬಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ‘ಸ್ಪಾ’ವೊಂದರ ವ್ಯವಸ್ಥಾಪಕನನ್ನು ಬೆದರಿಸಿ ಹಣ ಸುಲಿಗೆ ಯತ್ನಿಸಿದ ಪ್ರಕರಣದಲ್ಲಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
Advertisement
ರಾಜ್‌ನ್ಯೂಸ್ ಸುದ್ದಿವಾಹಿನಿ ಸಿಇಓ ವೆಂಕಟೇಶ್ ಹಾಗೂ ದಿವ್ಯಾ ವಸಂತ ಸಹೋದರ ಸಂದೇಶ್ ಬಂಧನವಾಗಿದ್ದು ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಗಳ ಮೊಬೈಲ್ ಜಪ್ತಿ ಮಾಡಿಕೊಳ್ಳಲಾಗಿದೆ. ಸದ್ಯ ದಿವ್ಯಾ ವಸಂತ ಕೂಡ ಅರೆಸ್ಟ್ ಆಗಿದ್ದು, ಜೀವನ್ ಭೀಮಾನಗರ ಪೊಲೀಸರು ಕೇರಳದಲ್ಲಿ ಬಂಧಿಸಿ ಕರೆತಂದಿದ್ದಾರೆ.