ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದೆ. ಇದನ್ನು ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿಯ ಕುರಿತು ಇಂದು (ಶುಕ್ರವಾರ) ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸಲಿದೆ.
ದೆಹಲಿಯಲ್ಲಿ ಈಗ ರದ್ದಾಗಿರುವ ಅಬಕಾರಿ ನೀತಿಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದೆ. ಇದನ್ನು ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿಯ ಕುರಿತು ಇಂದು (ಶುಕ್ರವಾರ) ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸಲಿದೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು ಮೇ 17ರಂದು ಈ ತೀರ್ಪನ್ನು ಕಾಯ್ದಿರಿಸಿತ್ತು.
ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪ್ರಚಾರಕ್ಕಾಗಿ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿತ್ತು. ಬಳಿಕ ಅವರು ಜೂನ್ 2 ರಂದು ಕೋರ್ಟ್ ಮುಂದೆ ಶರಣಾಗಿದ್ದರು.
ಜೂನ್ 20ರಂದು ಅರವಿಂದ್ ಕೇಜ್ರಿವಾಲ್ ಅವರಿಗೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯವು 1 ಲಕ್ಷ ರೂಪಾಯಿಗಳ ವೈಯಕ್ತಿಕ ಬಾಂಡ್ ಮೇಲೆ ಜಾಮೀನು ನೀಡಿತು. ಇಡಿ ಮರುದಿನ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ವಿಚಾರಣಾ ನ್ಯಾಯಾಲಯದ ಆದೇಶವು “ವಿಕೃತ”, “ಏಕಪಕ್ಷೀಯ” ಮತ್ತು ಸಂಶೋಧನೆಗಳು ಅಪ್ರಸ್ತುತ ಸತ್ಯಗಳನ್ನು ಆಧರಿಸಿವೆ ಎಂದು ವಾದಿಸಿತ್ತು.