ಬೆಂಗಳೂರು: ತಮಿಳುನಾಡಿಗೆ ಪ್ರತಿನಿತ್ಯ 1 ಟಿಎಂಸಿ ನೀರು ಹರಿಸುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿಯಂತ್ರಣಾ ಸಮಿತಿ ಸೂಚನೆ ನೀಡಿದೆ. ಇದರ ಬಗ್ಗೆ ಸಮಾಲೋಚಿಸಲು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಇಂದು ಮಧ್ಯಾಹ್ನ ಜಲ ಸಂಪನ್ಮೂಲ ಇಲಾಖೆಯ ತುರ್ತು ಸಭೆ ಕರೆಯಲಾಗಿದೆ.
Advertisement
ಜಲಸಂಪನ್ಮೂಲ ಇಲಾಖೆ ಹೊಂದಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೂಚನೆಯ ಮೇರೆಗೆ ಮಧ್ಯಾಹ್ನ 3 ಗಂಟೆಗೆ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಯಲಿದೆ. ಕಾವೇರಿ ಅಚ್ಚುಕಟ್ಟು ಪ್ರದೇಶದ ಸಚಿವರುಗಳು, ಜಲಸಂಪನ್ಮೂಲ ಇಲಾಖೆ ಉನ್ನತ ಅಧಿಕಾರಿಗಳು, ಕಾನೂನು ತಜ್ಞರು ಪಾಲ್ಗೊಳ್ಳಲಿದ್ದಾರೆ.
ಕಾವೇರಿ ಜಲಾನಯನ ಪ್ರದೇಶದ ವ್ಯಾಪ್ತಿಗೆ ಒಳಪಡುವ ಪ್ರದೇಶದ ಸಚಿವರಾದ ಚೆಲುವರಾಯಸ್ವಾಮಿ, ಡಾ.ಹೆಚ್.ಸಿ.ಮಹದೇವಪ್ಪ ಸೇರಿದಂತೆ ಹಲವು ಸಚಿವರು ಈ ಸಭೆಯಲ್ಲಿ ಭಾಗವಹಿಸಿ ತಮಿಳುನಾಡಿಗೆ ನೀರು ಬಿಡುವ ಬಗ್ಗೆ ಚರ್ಚೆ ನಡೆಸಲಿದ್ದಾರೆ.