ನೆಲಮಂಗಲ: ಸಿದ್ದರಾಮಯ್ಯ ಸರ್ಕಾರ ಬರೀ ಹಗರಣಗಳ ಸರಮಾಲೆಯಾಗಿದೆ. ವಾಲ್ಮೀಕಿ ನಿಗಮದ ದಲಿತರ ನೂರು ಪರ್ಸೆಂಟ್ ಹಣ ನುಂಗಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಆರೋಪಿಸಿದರು. ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಮಾತನಾಡಿದ ಅವರು,
ಸಿದ್ದರಾಮಯ್ಯ ಸರ್ಕಾರ ಬರೀ ಹಗರಣಗಳ ಸರಮಾಲೆಯಾಗಿದೆ. ವಾಲ್ಮೀಕಿ ನಿಗಮದ ದಲಿತರ ನೂರು ಪರ್ಸೆಂಟ್ ಹಣ ನುಂಗಿದ್ದಾರೆ. ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳಗಿದೆ. ಮೈಸೂರು ಮುಡಾ ಹಗರಣ ಹೊರತೆಗೆದ ಸಂದರ್ಭದಲ್ಲಿ ಬಿಜೆಪಿಗೆ ಮಾಡೋದಕ್ಕೆ ಕೆಲಸ ಇಲ್ಲ ಎಂದರು ಸಿದ್ದರಾಮಯ್ಯ. ನಾವು ಜನರ ಮುಂದೆ ಇಡುತ್ತಾ ಇದ್ದೇವೆ. ಅಂತಿಮವಾಗಿ ಜನ ತೀರ್ಮಾನ ಮಾಡುತ್ತಾರೆ ಎಂದು ಅಶೋಕ್ ಹೇಳಿದರು.



