ವಿಜಯಪುರ: ನಕಲಿ ಮತದಾನ ಮಾಡಿದ್ದಾರೆಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧದ ಆರೋಪವನ್ನು ಹೈಕೋರ್ಟ್ ವಜಾ ಮಾಡಿದೆ. ದೂರುದಾರ ಅಬ್ದುಲ್ ಹಮೀದ್ ಮುಶ್ರೀಫ್ಗೆ ಹೈಕೋರ್ಟ್(High Court) ದಂಡ ವಿಧಿಸಿದೆ.
2023 ರ ವಿಧಾನಸಭಾ ಚುನಾವಣೆಯಲ್ಲಿ ನಕಲಿ ಮತದಾನ ಮಾಡಿರುವ ಆರೋಪದ ಮೇಲೆ ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಶಾಸಕ ಯತ್ನಾಳ್ ವಿರುದ್ದ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಅಬ್ದುಲ್ ಹಮೀದ್ ಮುಶ್ರೀಫ್ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು.
ವಿಚಾರಣೆ ನಡೆಸಿದ ಹೈಕೋರ್ಟ್, ಯತ್ನಾಳ್ ವಿರುದ್ಧದ ಪ್ರಕರಣ ವಜಾ ಮಾಡಿ, ದೂರುದಾರ ಸುಳ್ಳು ಪ್ರಕರಣ ದಾಖಲಿಸಿದ್ದಾರೆಂದು ಅಬ್ದುಲ್ ಹಮೀದ್ ಮುಶ್ರೀಫ್ಗೆ 1 ಲಕ್ಷ ರೂ. ದಂಡ ಕಟ್ಟುವಂತೆ ನ್ಯಾಯಾಧೀಶೆ ಹೇಮಲೇಖಾ ಅವರು ಆದೇಶಿಸಿದ್ದಾರೆ.
ಈ ಕುರಿತು ಶಾಸಕ ಯತ್ನಾಳ್ ತಮ್ಮ ಟ್ವಿಟ್ಟರ್, ಪೇಸ್ಬುಕ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ‘ನನ್ನ ವಿರುದ್ದ ರಾಜಕೀಯ ಪ್ರೇರಿತವಾಗಿ ದುರುದ್ದೇಶದಿಂದ ದಾಖಲಿಸಿದ್ದ “ಚುನಾವಣಾ ಅರ್ಜಿಯನ್ನು” ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯ ವಜಾಗೊಳಿಸಿದೆ ಎಂದು.