ಶೀಘ್ರದಲ್ಲೇ ಕೆಎಸ್ಆರ್ಟಿಸಿ ಬಸ್ ಟಿಕೆಟ್ ದರ ಹೆಚ್ಚಳ -ಎಸ್.ಆರ್.ಶ್ರೀನಿವಾಸ್

0
Spread the love

ತುಮಕೂರು: ಶೀಘ್ರದಲ್ಲೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಬಸ್‌ಗಳ ಟಿಕೆಟ್ ದರ (Bus Ticket Fare) ಹೆಚ್ಚಾಗುವ ಸಾಧ್ಯತೆ ಇದೆ ಎಂದು ತುಮಕೂರಿನಲ್ಲಿ ಗುಬ್ಬಿ ‘ಕೈ’ ಶಾಸಕ ಎಸ್.ಆರ್.ಶ್ರೀನಿವಾಸ್ ತಿಳಿಸಿದ್ದಾರೆ.

Advertisement

ಮೊನ್ನೆ ಬೋರ್ಡ್ ಮೀಟಿಂಗ್ ಮಾಡಿ, ಟಿಕೆಟ್ ದರ ಹೆಚ್ಚಳ ಮಾಡುವ ವಿಚಾರದ ಪ್ರಸ್ತಾವನೆ ಸರ್ಕಾರಕ್ಕೆ ಸಲ್ಲಿಸಿದ್ದೇವೆ. ಈ ಹಿಂದೆ 2019ರಲ್ಲಿ ಕೆಎಸ್ಆರ್ಟಿಸಿ ಬಸ್ ಟಿಕೆಟ್ ದರ ಹೆಚ್ಚಳ ಆಗಿತ್ತು. ಇಲ್ಲಿ ತನಕ ಟಿಕೆಟ್ ದರ ಹೆಚ್ಚಳ ಮಾಡದೆ 5 ವರ್ಷ ಆಗಿದೆ. ತೈಲ ಬೆಲೆ ಏರಿಕೆ ಆಗಿರುವುದರಿಂದ ದರ ಏರಿಕೆ ಅನಿವಾರ್ಯ. ನೌಕರರಿಗೆ ಸಂಬಳ ಹೆಚ್ಚಳ ಮತ್ತು ಸವಲತ್ತು ಕೊಡುವುದನ್ನ ಮಾಡಬೇಕಾದರೆ ದರ ಹೆಚ್ಚಳ ಆಗಲೇಬೇಕು.

ಕೆಎಸ್‌ಆರ್‌ಟಿಸಿ ನೌಕರರ ವೇತನ ಪರಿಷ್ಕರಣೆ 2020ರಲ್ಲಿ ಮಾಡಬೇಕಿತ್ತು. ಇಲ್ಲಿ ತನಕ ಮಾಡಿಲ್ಲ. ಈ ಬಾರಿ 2024ರಲ್ಲಿ ವೇತನ ಪರಿಷ್ಕರಣೆ ಮಾಡ್ತಿವಿ. ಹಾಗಾಗಿ ಟಿಕೆಟ್ ದರ ಹೆಚ್ಚಳ ಆಗುತ್ತೆ. ಕಾಲಕಾಲಕ್ಕೆ ಹೆಚ್ಚಳ ಮಾಡಿದ್ರೆ ಹೀಗೆಲ್ಲ ಆಗ್ತಿರಲಿಲ್ಲ. ಕಳೆದ ತ್ರೈ ಮಾಸಿಕದಲ್ಲಿ ಕೆಎಸ್‌ಆರ್ಟಿಸಿಗೆ 295 ಕೋಟಿ ನಷ್ಟ ಆಗಿದೆ. 40 ಹೊಸ ವೋಲ್ವೋ ಬಸ್‌ಗಳಿಗೆ ಪ್ರಸ್ಥಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಈಗಾಗಲೆ 600 ಸಾಮಾನ್ಯ ಬಸ್‌ಗಳನ್ನು ಕೊಂಡುಕೊಳ್ಳಲಾಗಿದೆ. 15%-20 ದರ ಹೆಚ್ಚಳ ಮಾಡಲು ಪ್ರಸ್ಥಾವನೆ ಸಲ್ಲಿಸಲಾಗಿದೆ ಎಂದರು.

ಇನ್ನು ಉಳಿದದ್ದು ಸಿಎಂ ವಿವೇಚನೆಗೆ ಬಿಟ್ಟಿದ್ದು ರೇಟ್ ಜಾಸ್ತಿ ಮಾಡಿರುವುದರಿಂದ ಪುರುಷ ಪ್ರಯಾಣಿಕರಿಗೆ ಹೊರೆಯಾಗುತ್ತದೆ ಅನ್ನೋ ಪ್ರಶ್ನೆಯೇ ಇಲ್ಲ. ಶಕ್ತಿ ಯೋಜನೆಯಲ್ಲಿನ ಮಹಿಳಾ ಪ್ರಯಾಣಿಕರ ಟಿಕೆಟ್ ದರ ಹೆಚ್ಚಾಗುತ್ತೆ, ಸರ್ಕಾರ ಅದನ್ನು ತುಂಬಿಕೊಡುತ್ತೆ. ಕೆಎಸ್‌ಆರ್‌ಟಿಸಿ ಸಂಸ್ಥೆ ಉಳಿಯಬೇಕಾದರೆ ದರ ಹೆಚ್ಚಳ ಅನಿವಾರ್ಯ ಎಂದು ಎಸ್ ಆರ್ ಶ್ರೀನಿವಾಸ್ ತಿಳಿಸಿದರು.


Spread the love

LEAVE A REPLY

Please enter your comment!
Please enter your name here