ಉಡುಪಿ: ನಿನ್ನೆ ಭಾನುವಾರ ರಾತ್ರಿ ಸುರಿದ ಮಳೆಗೆ ಶಾಲೆಯ ಅಡುಗೆ ಕೋಣೆಗೋಡೆ ಕುಸಿದಿದೆ. ಉಡುಪಿ ನಗರದ ದೊಡ್ಡಣ್ಣಗುಡ್ಡೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದೆ. ಶಾಲೆಯ ಅಡುಗೆ ಕೋಣೆಯ ಗೋಡೆ ಭಾರಿ ಮಳೆಗೆ ಕುಸಿದ ಪರಿಣಾಮ ವಸ್ತುಗಳಿಗೆ ಹಾನಿಯಾಗಿದೆ. ರಾತ್ರಿ ವೇಳೆ ಕುಸಿದ ಹಿನ್ನೆಲೆಯಲ್ಲಿ ಯಾರಿಗೂ ಯಾವುದೇ ಅಪಾಯ ಸಂಭವಿಸಿಲ್ಲ.
Advertisement