ಬೆಂಗಳೂರು: ರಾಜು ಕಾಗೆ ದರ ಏರಿಕೆ ಬಗ್ಗೆ ಹೇಳಿರೋದು ಅವರ ವೈಯಕ್ತಿಕ ಅಭಿಪ್ರಾಯ. ಸದ್ಯ ಬಸ್ ಟಿಕೆಟ್ ದರ ಏರಿಕೆ ಪ್ರಸ್ತಾವನೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ಬಸ್ ಟಿಕೆಟ್ ದರ ಏರಿಕೆ ಸದ್ಯಕ್ಕಿಲ್ಲ, ರಾಜು ಕಾಗೆ ದರ ಏರಿಕೆ ಬಗ್ಗೆ ಹೇಳಿರುವುದು ಅವರ ವೈಯಕ್ತಿಕ ಅಭಿಪ್ರಾಯ.
ಸದ್ಯ ಬಸ್ ಟಿಕೆಟ್ ದರ ಏರಿಕೆ ಪ್ರಸ್ತಾವನೆ ನಮ್ಮ ಮುಂದಿಲ್ಲ ಎಂದು ತಿಳಿಸಿದರು. ಮುಡಾ ಬಗ್ಗೆ ಬಿಜೆಪಿಯವರು ಮಾತಾಡ್ತಾರೆ. ಹಗರಣ ಅಂತಾರೆ, ನಡೆದಿರೋದು ಯಾರ ಕಾಲದಲ್ಲಿ? ಆಗ ಯಡಿಯೂರಪ್ಪ ಸಿಎಂ ಆಗಿದ್ರು, ಬಿಜೆಪಿಯವರೇ ಸಚಿವರಾಗಿದ್ರು. ಮುಡಾ ಅಧ್ಯಕ್ಷರು ಬಿಜೆಪಿಯವರೇ. ಹಗರಣಕ್ಕೆ ಬಿಜೆಪಿಯವರೇ ಕಾರಣ ಎಂದು ಆರೋಪಿಸಿದರು.



