ವಿಜಯಸಾಕ್ಷಿ ಸುದ್ದಿ, ಗದಗ : ಕಪ್ಪತ್ತಗುಡ್ಡದ ರಮಣೀಯ ಪರಿಸರದ ರಸದೌತಣ ಸವಿಯಲು ಬರುವ ಪ್ರವಾಸಿಗರಿಗೆ ಮುಂಡರಗಿ ತಾಲೂಕಿನ ಜಂತಲಿ ಶಿರೂರು ಗ್ರಾಮದ ಜನಪದ ಕಲಾವಿದರಾದ ಗವಿಶಿದ್ದಯ್ಯ ಹಳ್ಳಿಕೇರಿಮಠ ಅವರು ಇಂಡಿಯಾ ಫೌಂಡೇಶನ್ ಫಾರ್ ಆರ್ಟ್ಸ್ ಇವರ ಸಹಯೋಗದಲ್ಲಿ ಕಲಾ ಶಿಕ್ಷಣದ ಮೂಲಕ ಪರಿಸರ ಜಾಗೃತಿ ನಡೆಸಿದರು.
Advertisement
ಕಾರ್ಯಕ್ರಮದಲ್ಲಿ ಹೆಸರೂರಿನ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ಏರ್ಪಡಿಸಿದ್ದ ಕಪ್ಪತ್ತಗುಡ್ಡ ಚಾರಣ ಪರಿಸರದರಿವು ಕಾರ್ಯಕ್ರಮದಲ್ಲಿ ಕಪ್ಪತ್ತಗುಡ್ಡದಲ್ಲಿ ಸ್ವಚ್ಛತೆ ಹಾಗೂ ಗುಡ್ಡದ ಮಹತ್ವ ಸಾರುವ ನಿಟ್ಟಿನಲ್ಲಿ ಅನೇಕ ಜಾನಪದ ಜಾಗೃತಿ ಗೀತೆಗಳನ್ನು ಹಾಡುವ ಮೂಲಕ ಜಾಗೃತಿ ಮೂಡಿಸಿದರು.