ವಿಜಯಸಾಕ್ಷಿ ಸುದ್ದಿ, ಗದಗ : ಹರ್ಲಾಪೂರದ ಶ್ರೀ ಬಸವಾನಂದ ಸಾಂಸ್ಕೃತಿಕ ಸೇವಾ ಸಂಸ್ಥೆಯು 5 ವರ್ಷಗಳ ಕಾಲ ಸಾಮಾಜಿಕ, ಧಾರ್ಮಿಕ, ಆಧ್ಯಾತ್ಮಿಕ ಕ್ಷೇತ್ರಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸುತ್ತ, ಈಗ 6ನೇ ವರ್ಷದ ವಾರ್ಷಿಕೋತ್ಸವ ಆಚರಿಸಿಕೊಳ್ಳುತ್ತಿರುವದು ಹೆಮ್ಮೆಯ ವಿಷಯವಾಗಿದೆ ಎಂದು ಪದ್ಮಾಕ್ಷರಯ್ಯ ತಾತನವರು ಹೇಳಿದರು.
ಅವರು ಹರ್ಲಾಪೂರ ಗ್ರಾಮದಲ್ಲಿ ಜರುಗಿದ ಶ್ರೀ ಬಸವಾನಂದ ಸಾಂಸ್ಕೃತಿಕ ಸೇವಾ ಸಂಸ್ಥೆಯ 6ನೇ ವಾರ್ಷಿಕೋತ್ಸವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿ, ಈ ಸೇವಾ ಸಂಸ್ಥೆಯು ಹಲವಾರು ಕಾರ್ಯಕ್ರಮಗಳನ್ನು ನಡೆಸುತ್ತ ಸಾಧನೆ ಮಾಡಿದೆ. ಈ ನಾಡಿನ ಹಲವಾರು ಮಠಾಧೀಶರನ್ನು ಕರೆಯಿಸಿ ಧಾರ್ಮಿಕ, ಧರ್ಮದ ಜಾಗೃತಿ ಕಾರ್ಯಕ್ರಮವನ್ನು ನಡೆಸಿದೆ. ಈ ಸಂಸ್ಥೆಯ ಸಾಮಾಜಿಕ ಕಾರ್ಯಗಳು ಹೀಗೆಯೇ ಮುಂದುವರೆಯಲೆಂದು ಹಾರೈಸಿದರು.
ಕಾರ್ಯಕ್ರಮವನ್ನು ಮಾಜಿ ಸೈನಿಕರಾದ ಶರಣಯ್ಯ ಸ್ವಾಮಿ ಉದ್ಘಾಟಿಸಿದರು. ಸಭಾ ನಿರೂಪಣೆಯನ್ನು ಬಸವರಾಜ ಸ್ವಾಮಿಯವರು ನೆರವೇರಿಸಿದರು. ಕಾರ್ಯದರ್ಶಿ ಸದಾನಂದ ಶಾಸ್ತಿçಗಳು ವಂದಿಸಿದರು. ನಂತರ ಸಂಸ್ಥೆಯ 6ನೇ ವರ್ಷದ ವಾರ್ಷಿಕೋತ್ಸವ ನಿಮಿತ್ತ ಗಾನಸುದೆ ಸಂಗೀತೋತ್ಸವ ಕಾರ್ಯಕ್ರಮ ಜರುಗಿತು.