ಬೆಂಗಳೂರು: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣದ ತನಿಖೆ ದಿನದಿಂದ ದಿನಕ್ಕೆ ತನಿಖೆ ಚುರುಕಾಗ್ತಿದೆ. ವಾಲ್ಮೀಕಿ ನಿಗಮದ ಅಕ್ರಮ ಸಂಬಂಧ ಶಾಸಕರ ನಾಗೇಂದ್ರ ಅರೆಸ್ಟ್ ಆಗಿದ್ದಾರೆ. ಈಗಿರುವಾಗಲೇ ಮಾಜಿ ಸಚಿವ ಬಿ.ನಾಗೇಂದ್ರ ಪತ್ನಿಯನ್ನು ಇಡಿ ವಶಕ್ಕೆ ಪಡೆದುಕೊಂಡಿದೆ.
Advertisement
ಸದ್ಯ ಬೆಂಗಳೂರಿನಲ್ಲಿ ತಮ್ಮ ಕಚೇರಿಗೆ ಮಂಜುಳಾ ಅವರನ್ನು ಇಡಿ ಅಧಿಕಾರಿಗಳು ಕರೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ. ಇಂದು ಬೆಳಗ್ಗೆ ಡಾಲರ್ಸ್ ಕಾಲೋನಿಯಲ್ಲಿರುವ ಅವರ ನಿವಾಸದಲ್ಲಿ ಇಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ಹೆಚ್ಚಿನ ತನಿಖೆಗಾಗಿ ಶಾಂತಿನಗರದಲ್ಲಿರುವ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ.