ಅಂಕೋಲಾದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ: ಹೆಚ್ ಡಿ ಕುಮಾರಸ್ವಾಮಿ ಸಂತಾಪ

0
Spread the love

ಬೆಂಗಳೂರು: ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಆದ ಭೂಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವೀಟ್ ಮೂಲಕ ಕೇಂದ್ರ ಸಚಿವ ಹೆಚ್ʼಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. ಗುಡ್ಡ ಕುಸಿತಕ್ಕೆ ಸಿಲುಕಿ ಇಬ್ಬರು ಮಕ್ಕಳು ಸೇರಿ ಹಲವರು ಸಾವನ್ನಪ್ಪಿರುವ ಧಾರುಣ ಘಟನೆ ನನಗೆ ತೀವ್ರ ಆಘಾತ ಉಂಟು ಮಾಡಿದೆ ಎಂದಿದ್ದಾರೆ.

Advertisement

ಮೃತರೆಲ್ಲರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ನೋವುನ್ನು ಭರಿಸುವ ಶಕ್ತಿಯನ್ನು ಭಗವಂತ ಆ ಕುಟುಂಬಗಳಿಗೆ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.

ಈಗಾಗಲೇ ಉತ್ತರ ಕನ್ನಡ ಜಿಲ್ಲಾಧಿಕಾರಿಗಳ ಜತೆ ದೂರವಾಣಿಯಲ್ಲಿ ಮಾತನಾಡಿ, ‘ಪರಿಹಾರ ಕಾರ್ಯ, ಮೃತರ ಕುಟುಂಬಗಳಿಗೆ ನೆರವು ಇತ್ಯಾದಿ ಕ್ರಮಗಳ ಬಗ್ಗೆ ಮಾಹಿತಿ ಇದೆ. ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಇನ್ನೂ ಹಲವೆಡೆ ಭೂಕುಸಿತವಾಗುವ ಆತಂಕವಿದ್ದು, ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ ಎಂದು ಹೇಳಿದರು.


Spread the love

LEAVE A REPLY

Please enter your comment!
Please enter your name here