ದೇವನಹಳ್ಳಿ:- ಇನೋವಾ ಕ್ರಿಸ್ಟಾ ಕಾರ್ ಪಲ್ಟಿ ಹೊಡೆದ ಘಟನೆ ಹೊಸಕೋಟೆ ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಜರುಗಿದೆ. ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಹೇಳುತ್ತಿದ್ದಾರೆ.
Advertisement
ಘಟನೆಯಿಂದ ಕಾರಲ್ಲಿ ಇದ್ದ ನಾಲ್ಕು ಜನರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ನಗರದ ಸಿಲಿಕಾನ್ ಸಿಟಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಅಪಘಾತದಿಂದ ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿದೆ. ಹೆದ್ದಾರಿ ಡಿವೈಡ್ರಿಗೆ ಡಿಕ್ಕಿಯೊಡೆದ ಪರಿಣಾಮ ಕಾರು ಉರುಳಿದೆ. ಸ್ಥಳಕ್ಕೆ ಹೊಸಕೋಟೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ತನಿಖೆ ಮುಂದುವರಿದಿದೆ.