ವಿಚ್ಛೇದಿತ ಪತ್ನಿಗೆ ಶೇ.70ರಷ್ಟು ಜೀವನಾಂಶ ನೀಡಲಿದ್ದಾರಾ​ ಪಾಂಡ್ಯ?

0
Spread the love

ನಾಲ್ಕು ವರ್ಷಗಳ ದಾಂಪತ್ಯ ಜೀವನಕ್ಕೆ ಟೀಮ್​ ಇಂಡಿಯಾದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಬ್ರೇಕ್ ಹಾಕಿದ್ದಾರೆ. ಪತ್ನಿಗೆ ವಿಚ್ಛೇದನ ನೀಡಿರುವ ವಿಚಾರವನ್ನು ಪಾಂಡ್ಯ ಗುರುವಾರ ಅಧಿಕೃತ ಪ್ರಕಟನೆಯೊಂದಿಗೆ ತಿಳಿಸಿದ್ದರು. ಇದೀಗ ಪಾಂಡ್ಯ ತನ್ನ ಆಸ್ತಿಯಲ್ಲಿ ಪತ್ನಿಗೆ ಜೀವನಾಂಶವಾಗಿ ಶೇ. 70 ಪ್ರತಿಶತವನ್ನು ಬಿಟ್ಟುಕೊಡಬೇಕು ಎನ್ನುವ ಚರ್ಚೆಗಳು ಸಾಮಾಜಿಕ ಜಾಲತಾಣದಲ್ಲಿ ಶುರುವಾಗಿದೆ.

Advertisement

ಹಾರ್ದಿಕ್​ ಪಾಂಡ್ಯ ತಮ್ಮ ಎಲ್ಲ ಆಸ್ತಿಯನ್ನು ತಾಯಿಯ ಹೆಸರಿನಲ್ಲಿ ಮಾಡಿಟ್ಟಿದ್ದಾರೆ. ಈ ವಿಚಾರವನ್ನು ಸ್ವತಃ ಅವರೇ ರಿವೀಲ್​ ಮಾಡಿದ್ದರು. ಹಿಂದೊಮ್ಮೆ ಸಂದರ್ಶನದಲ್ಲಿ ಮುಕ್ತವಾಗಿ ಮಾತನಾಡಿದ್ದ ಪಾಂಡ್ಯ “ನಾನು ಜಾಹಿರಾತು, ಕ್ರಿಕೆಟ್​ ಸೇರಿ ಇನ್ನಿತರ ಮೂಲಗಳಿಂದ ಎಷ್ಟೇ ಹಣ ಸಂಪಾದಿಸಿದರೂ ಕೂಡ ಇದನೆಲ್ಲ ನನ್ನ ಹೆಸರಿನಲ್ಲಿ ಇಟ್ಟಿಲ್ಲ. ನನ್ನ ಬಳಿ ದುಬಾರಿ ಕಾರು, ಬಂಗಲೆ ಇದ್ದರೂ ಕೂಡ ಇದೆಲ್ಲ ನನ್ನ ತಾಯಿಯ ಹೆಸರಿನಲ್ಲಿದೆ. ಹೀಗಾಗಿ ನಾನು ಯಾವುದೇ ಸಮಸ್ಯೆ ಬಂದರೂ ಕೂಡ ಯಾರೀಗೂ ನನ್ನ ಆಸ್ತಿಯಲ್ಲಿ ಶೇ. 50ರಷ್ಟು ಜೀವನಾಂಶ ಕೊಡುವ ಪ್ರಮೇಯವೇ ಬರುವುದಿಲ್ಲ ಎಂದು ಹೇಳಿದ್ದರು.

ಸದ್ಯ ಪಾಂಡ್ಯ ಅವರು ಪತ್ನಿಗೆ ಜೀವನಾಂಶ ನೀಡುವ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿ ಇಲ್ಲ. ಹೀಗಾಗಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸುದ್ದಿಗಳು ಸುಳ್ಳಾಗಿದೆ. ನತಾಶ ಇದುವರೆಗೆ ಹಾರ್ದಿಕ್‌ ಅವರಿಂದ ಜೀವನಾಂಶವಾಗಿ ಯಾವುದೇ ರೀತಿಯ ಪಾಲು ಕೇಳಿಲ್ಲ. ಹೀಗಾಗಿ ಪಾಂಡ್ಯ ಮತ್ತು ನತಾಶ ಜೀವನಾಂಶದ ಬಗ್ಗೆ ಹರಿದಾಡುತ್ತಿರುವ ಸುದ್ದಿಯಲ್ಲಿ ಸತ್ಯಾಂಶವಿಲ್ಲ.


Spread the love

LEAVE A REPLY

Please enter your comment!
Please enter your name here