ಹಾಸನ:- ನಗರದ ಖಾಸಗಿ ಆಸ್ಪತ್ರೆಯಲ್ಲಿ ಡೆಂಗ್ಯೂಗೆ MBBS ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಜರುಗಿದೆ.
Advertisement
ಕುಶಾಲ್ (22) ಮೃತ ವಿದ್ಯಾರ್ಥಿ. ಕುಶಾಲ್ ಡೆಂಗ್ಯೂ ಮಹಾಮಾರಿಯಿಂದಲೇ ಮೃತಪಟ್ಟಿದ್ದಾನೆ ಎನ್ನಲಾಗಿದ್ದು, ಪ್ರಯೋಗಾಲಯದ ವರದಿ ಬಂದ ನಂತರ ನಿಖರ ಕಾರಣ ತಿಳಿಯಲಿದೆ ತಿಳಿದುಬಂದಿದೆ
ಕಳೆದ ಒಂದು ವಾರದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕುಶಾಲ್, ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ತಡರಾತ್ರಿ ಸಾವನ್ನಪ್ಪಿದ್ದಾನೆ. ಪ್ರತಿಭಾನ್ವಿತ, ಬಡ ವಿದ್ಯಾರ್ಥಿಯಾಗಿದ್ದ ಕುಶಾಲ್, ಹಿಮ್ಸ್ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಭವಿಷ್ಯದಲ್ಲಿ ವೈದ್ಯನಾಗಿ ಜನಸೇವೆ ಮಾಡಬೇಕು ಎಂಬ ಹಂಬಲ ಇಟ್ಟುಕೊಂಡಿದ್ದ.