ಶೃಂಗೇರಿ ಶಾರದಾಂಬೆ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ: ಭಾರತೀಯ ಉಡುಗೆ ಕಡ್ಡಾಯ!

0
Spread the love

ಚಿಕ್ಕಮಗಳೂರು:- ಇದೇ ಆಗಸ್ಟ್ 15ರಿಂದ ಶ್ರೀ ಶಾರದಮ್ಮನವರ ದರ್ಶನಕ್ಕೆ ಹಾಗೂ ಗುರುಗಳ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳು ಕಡ್ಡಾಯವಾಗಿ ಭಾರತೀಯ ಸಂಪ್ರದಾಯಿಕ ಉಡುಗೆಯಲ್ಲಿ ಬರುವಂತೆ ಸೂಚಿಸಿ ಶೃಂಗೇರಿ ಶ್ರೀ ಶಾರದಾ ಪೀಠದ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದೆ ಮೊದಲ ಬಾರಿಗೆ ಶೃಂಗೇರಿ ಶಾರದಾ ಮಠದಿಂದ ವಸ್ತ್ರ ಸಂಹಿತೆ ಜಾರಿ ಮಾಡಿದೆ.

Advertisement

ಒಂದು ವೇಳೆ ಭಾರತೀಯ ಸಾಂಪ್ರದಾಯಕವಲ್ಲದ ಉಡುಗೆಯನ್ನು ತೊಟ್ಟು ಬಂದವರಿಗೆ ಶ್ರೀ ಶಾರದಾಂಬೆ ದೇವಸ್ಥಾನದ ಅರ್ಧ ಮಂಟಪದ ಒಳಗೆ ಪ್ರವೇಶವಿರುವುದಿಲ್ಲ. ಅಂತವರು ಹೊರಗಿನ ಪ್ರಕಾರದಿಂದಲೇ ದೇವರ ದರ್ಶನವನ್ನು ಪಡೆಯಬೇಕಾಗುತ್ತದೆ.

ಪುರುಷರಾದಲ್ಲಿ ಧೋತಿ ಶಲ್ಯ ಮತ್ತು ಉತ್ತರೀಯ ಹಾಗೂ ಮಹಿಳೆಯರು ಸೀರೆ ರವಿಕೆ, ಸಲ್ವಾರ್ – ದುಪಟ್ಟ ಅಥವಾ ಲಂಗ ದಾವಣಿಗಳಂತ ಸಾಂಪ್ರದಾಯಿಕ ಉಡುಗೆಗಳನ್ನು ಧರಿಸಿ ದೇವರ ದರ್ಶನ ಮಾಡಬಹುದು ಎಂದು ಶೃಂಗೇರಿ ಶಾರದಾ ಪೀಠ ತನ್ನ ಪ್ರಕಟಣೆಯಲ್ಲಿ ತಿಳಿಸಿದ.


Spread the love

LEAVE A REPLY

Please enter your comment!
Please enter your name here