ಬೆಳಗಾವಿ: ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಉಗರಗೋಳ ಬಳಿ ಬೈಕ್ʼಗಳ ನಡುವೆ ಅಪಘಾತ ಸಂಭವಿಸಿದ್ದು, ಇಬ್ಬರು ಸವಾರರು ದಾರುಣವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಬಸವರಾಜ ಪ್ರಭುನವರ್(48),
ಯಲ್ಲಪ್ಪ ಕೊರವಿನಕೊಪ್ಪ( 46) ಮೃತ ದುರ್ದೈವಿಗಳು. ಮತ್ತಿಬ್ಬರು ಬೈಕ್ ಸವಾರಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ರಾಮದುರ್ಗ ಡಿವೈಎಸ್ಪಿ, ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.



