ಬೆಳಗಾವಿ: ಪಶ್ಚಿಮಘಟ್ಟ ಪ್ರದೇಶದಲ್ಲಿ ಮುಂದುವರೆದ ಧಾರಾಕಾರ ಮಳೆ ಹಿನ್ನೆಲೆಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ನಾಲ್ಕು ಸೇತುವೆಗಳು ಜಲಾವೃತಗೊಂಡಿವೆ. ಸುಣಧೋಳಿ – ಮೂಡಲಗಿಗೆ ಸಂಪರ್ಕ ಕಲ್ಪಿಸುವ ಬ್ರಿಡ್ಜ್ ಕಮ್ ಬ್ಯಾರೇಜ್, ಅವರಾದಿ- ನಂದಗಾಂವ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಬ್ರಿಡ್ಜ್ ಕಮ್ ಬ್ಯಾರೇಜ್, ಕಮಲದಿನ್ನಿ – ಹುಣಶ್ಯಾಳ ಪಿವೈ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಬ್ರಿಡ್ಜ್ ಕಮ್ ಬ್ಯಾರೇಜ್,
Advertisement
ವಡೆರಹಟ್ಟಿ – ಗೋಕಾಕ ತಾಲೂಕಿನ ಉದಗಟ್ಟಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಬ್ರಿಡ್ಜ್ ಕಮ್ ಬ್ಯಾರೇಜ್ ಜಲಾವೃತಗೊಂಡಿವೆ. ನಾಲ್ಕು ಸೇತುವೆಗಳ ಎರಡು ಬದಿಯಲ್ಲಿ ಬ್ಯಾರಿ ಗೇಟ್ ಹಾಕಿ ಪೊಲೀಸ್ ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ. ಪ್ರವಾಹ ಎದುರಾಗುವ ಭೀತಿಗೆ ನದಿ ದಡದಲ್ಲಿರುವ ಪಂಪ್ಸೆಟ್ಟುಗಳನ್ನು ರೈತರು ತೆಗೆಯುತ್ತಿದ್ದಾರೆ.