ಶಿವಮೊಗ್ಗ:ಇಬ್ಬರು ಮಕ್ಕಳ ಜೊತೆ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಯನ್ನು ಪೊಲೀಸರು ರಕ್ಷಣೆ ಮಾಡಿರುವಂತಹ ಘಟನೆ ನಡೆದಿದೆ. ಜಿಲ್ಲೆಯ ಸಾಗರ ತಾಲೂಕಿನ ಕುಗ್ವೆ ಗ್ರಾಮದಲ್ಲಿ ಪ್ರೀತಿ(13), ಪ್ರಜ್ವಲ್(9) ಹಾಗೂ ಸಂಗೀತಾ(33) ಆತ್ಮಹತ್ಯೆಗೆ ಯತ್ನಿಸಿದ್ದವರು.
Advertisement
ಮಹಿಳೆ ತನ್ನ ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದ ಕೂಡಲೇ ಸ್ಥಳೀಯರು ಪೊಲೀಸರಿಗೆ ಕರೆಮಾಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಮಹಿಳೆ ಮತ್ತು ಮಕ್ಕಳನ್ನ ರಕ್ಷಿಸಿದ್ದಾರೆ.
ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.