Budget: ಕೃಷಿ ಕ್ಷೇತ್ರಕ್ಕೆ 1.5 ಲಕ್ಷ ಕೋಟಿ ರೂ. ಘೋಷಣೆ: ನಿರ್ಮಲಾ ಸೀತಾರಾಮನ್

0
Spread the love

ನವದೆಹಲಿ: ಮಧ್ಯಂತರ ಬಜೆಟ್ನಲ್ಲಿ ಉಲ್ಲೇಖಿಸಿರುವಂತೆ ನಾವು ಬಡವರು, ಮಹಿಳೆಯರು, ಯುವಕರು ಮತ್ತು ರೈತರ ಮೇಲೆ ಗಮನ ಕೇಂದ್ರೀಕರಿಸಿದ್ದೇವೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ರೈತರಿಗೆ, ನಾವು ಎಲ್ಲಾ ಪ್ರಮುಖ ಬೆಳೆಗಳಿಗೆ ಹೆಚ್ಚಿನ ಕನಿಷ್ಠ ಬೆಂಬಲ ಬೆಲೆಯನ್ನು ಘೋಷಿಸಿದ್ದೇವೆ, ಭರವಸೆಯನ್ನು ಈಡೇರಿಸಿದ್ದೇವೆ.

Advertisement

ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯು 5 ವರ್ಷಗಳವರೆಗೆ ಕನಿಷ್ಠ 50% ಮಾರ್ಜಿನ್ ವೆಚ್ಚದಲ್ಲಿ 80 ಕೋಟಿ ಜನರಿಗೆ ಪ್ರಯೋಜನವನ್ನು ನೀಡುತ್ತದೆ. ಇನ್ನೂ ರೈತರು ಮತ್ತು ಕೃಷಿ ಕ್ಷೇತ್ರಕ್ಕೆ ಬಜೆಟ್ನಲ್ಲಿ 1.52 ಲಕ್ಷ ಕೋಟಿ ರೂ. ಘೋಷಣೆ ಮಾಡಲಾಗಿದೆ. ನಿಧಿಯಿಂದ ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳಿಗೆ ಯೋಜನೆಗಳನ್ನು ರೂಪಿಸಲಾಗುವುದು ಎಂದು ನಿರ್ಮಲಾ ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here