ದಾವಣಗೆರೆ:-ಭೀಕರ ರಸ್ತೆ ಅಪಘಾತದಲ್ಲಿ ಶಿಕಾರಿಪುರ ಶಾಲೆಯ ಫಾದರ್ ಸಾವನ್ನಪ್ಪಿದ ಘಟನೆ ಜರುಗಿದೆ.
Advertisement
ಕೆಎಸ್ಆರ್ಟಿಸಿ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಶಿಕಾರಿಪುರದ ಶಾಲೆಯ ಫಾದರ್ ಮೃತಪಟ್ಟು, ಚಾಲಕನಿಗೆ ಗಂಭೀರಗಾಯಗಳಾಗಿರುವ ಘಟನೆ ಜಿಲ್ಲೆಯ ನ್ಯಾಮತಿ ತಾಲೂಕಿನ ಚಿನ್ನಿಕಟ್ಟೆ ಬಳಿ ನಡೆದಿದೆ.
ಜಿಲ್ಲೆಯ ಶಿಕಾರಿಪುರದ ಪುಷ್ಪ ಶಾಲೆಯ ಫಾದರ್ ಅಂತೋನಿ (60) ಮೃತರು. ಚಾಲಕ ಸ್ಟೀಫನ್ ಗಾಯಾಳು. ಸವಳಂಗ ಕಡೆಯಿಂದ ಶಿಕಾರಿಪುರಕ್ಕೆ ಹುಂಡೈ ಕಾರಿನಲ್ಲಿ ಫಾದರ್ ಪ್ರಯಾಣಿಸುತ್ತಿದ್ದರು. ಎದುರಿಗೆ ಬಂದ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಡಿಕ್ಕಿ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಶಿವಮೊಗ್ಗದ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.