ಚಿಕ್ಕಬಳ್ಳಾಪುರ:– ಚಿಕ್ಕಬಳ್ಳಾಪುರದಲ್ಲಿ ಬೆಳ್ಳಂ ಬೆಳಗ್ಗೆ ಶೂಟೌಟ್ ನಡೆದಿದೆ. ಜಿಲ್ಲೆಯ ಗುಡಿಬಂಡೆ ತಾಲೂಕಿನ ಹಂಪಸಂದ್ರ ಗ್ರಾಮದಲ್ಲಿ ಪಿಸ್ತೂಲ್ನಿಂದ ಗುಂಡು ಹಾರಿಸಿ ಅಣ್ಣನ ಮಗನನ್ನು ಚಿಕ್ಕಪ್ಪ ಕೊಲೆಗೈದಿರುವ ಘಟನೆ ಜರುಗಿದೆ.
Advertisement
ನಜೀರ್ ಅಹ್ಮದ್ ಕೊಲೆಯಾದ ದುರ್ದೈವಿ ಎಂದು ತಿಳಿದು ಬಂದಿದೆ.
ಬಶೀರ್ ಅಹ್ಮದ್ (66) ಗುಂಡು ಹಾರಿಸಿ ಕೊಲೆ ಮಾಡಿದ ಆರೋಪಿ ಆಗಿದ್ದಾನೆ. ಅಣ್ಣ ಮಾಬೂಸಾಬ ಮೇಲೂ ಮಾರಕಾಸ್ತ್ರದಿಂದ ದಾಳಿ ಮಾಡಿದ್ದಾನೆ. ಗಂಭೀರವಾಗಿ ಗಾಯಗೊಂಡಿರುವ ಮಾಬೂಸಾಬನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಆರೋಪಿ ಬಶೀರ್ ಅಹ್ಮದ್ ಸೌದಿಯಲ್ಲಿ ಕೆಲಸ ಮಾಡಿಕೊಂಡಿದ್ದ. ಇತ್ತೀಚೆಗೆ ಊರಿಗೆ ಬಂದಿದ್ದ ಎನ್ನಲಾಗಿದೆ. ಕೊಲೆ ಮಾಡಿದ ಆರೋಪದ ಮೇಲೆ ಪೊಲೀಸರು ಬಶೀರ್ ಅಹ್ಮದ್‌ನನ್ನು ವಶಕ್ಕೆ ಪಡೆದಿದ್ದಾರೆ. ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.