ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿ ಬಿದ್ದ ಶಾಲಾ ವಾಹನ! ತಪ್ಪಿದ ಭಾರೀ ಅನಾಹುತ

0
Spread the love

ಬೆಳಗಾವಿ: ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದ ಹೊರವಲಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಶಾಲಾ ವಾಹನ ಪಲ್ಟಿ ಹೊಡೆದ ಘಟನೆ ನಡೆದಿದೆ. ಅಪಘಾತದಲ್ಲಿ ನಾಲ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಖಾಸಗಿ ಸಂಸ್ಥೆಗೆ ಸೇರಿದ ಬಸ್ 40ಕ್ಕೂ ಅಧಿಕ ಶಾಲಾ ವಿದ್ಯಾರ್ಥಿಗಳನ್ನು ಸಾಗಿಸುತ್ತಿತ್ತು. ಆದರೆ ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿಬಿದ್ದಿದೆ. ನಾಲ್ವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿವೆ.

Advertisement

ಮರಡಿಮಠ ಗ್ರಾಮದ ಜೈ ಹನುಮಾನ್ ಸಂಜೀವ ನಾಯಕ‌ ಆಂಗ್ಲ ಮಾಧ್ಯಮ ಶಾಲೆಗೆ ಸೇರಿದ ಶಾಲಾ ಬಸ್ ಇದಾಗಿದೆ. ಮಾವನೂರ ಮೇಲ್ಮನಹಟ್ಟಿ, ಗೋಡಚಿನಮಲ್ಕಿ ಗ್ರಾಮದ ಎಲ್ ಕೆಜಿಯಿಂದ 8ನೇ ತರಗತಿ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಗೋಕಾಕ ಗ್ರಾಮೀಣ ಠಾಣೆ‌‌‌ ಪೋಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗೋಕಾಕ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

LEAVE A REPLY

Please enter your comment!
Please enter your name here