ಪ್ಯಾರಿಸ್:- ಇದೇ ಜುಲೈ 19ರ ರಾತ್ರಿ ಆತಂಕಕಾರಿ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದ್ದು, ಒಲಿಂಪಿಕ್ಸ್ ಕ್ರೀಡೆ ನೋಡಲು ಬಂದಿದ್ದ ಮಹಿಳೆ ಮೇಲೆ ಗ್ಯಾಂಗ್ ರೇಪ್ ನಡೆದಿದೆ.
Advertisement
ಮೌಲಿನ್ ರೋಗ್ ಕ್ಯಾಬರ್ಟ್‌ನ ಪಬ್‌ವೊಂದರಲ್ಲಿ ಮದ್ಯ ಸೇವಿಸಿ, ಹೊರ ಬರುವ ಸಂದರ್ಭದಲ್ಲಿ ಆಕೆಯನ್ನು ಐವರು ಕಾಮುಕರ ಗ್ಯಾಂಗ್ ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಅತ್ಯಾಚಾರ ನಡೆಸಿದ್ದಾಗಿ ಮಹಿಳೆ ಆರೋಪಿಸಿದ್ದಾರೆ. ಅಲ್ಲದೇ ಫ್ರಾನ್ಸ್ನಲ್ಲಿ ಮಹಿಳೆಯರಿಗೆ ಸರಿಯಾದ ಸುರಕ್ಷತೆ ಇಲ್ಲವೆಂದು ಅಸಮಾಧಾನ ಹೊರಹಾಕಿದ್ದಾರೆ
ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವೀಡಿಯೋದಲ್ಲಿ ಸಂತ್ರಸ್ತ ಮಹಿಳೆ ಹರಿದ ಬಟ್ಟೆಯಲ್ಲಿದ್ದು, ಸ್ಥಳೀಯರ ರಕ್ಷಣೆ ಪಡೆದುಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಅನೇಕ ಸಿಸಿಟಿವಿ ದೃಶ್ಯಗಳು ಲಭ್ಯವಾಗಿದೆ.