ಸಿಎಂ 1 ಲಕ್ಷ ವಸತಿ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ!

0
Spread the love

ಬೆಂಗಳೂರು:- ಮುಖ್ಯಮಂತ್ರಿ ಅವರ ಒಂದು ಲಕ್ಷ ಮನೆ ಯೋಜನೆ ಫಲಾನುಭವಿಗಳಿಗೆ ಸಿದ್ದರಾಮಯ್ಯ ಸಿಹಿ ಸುದ್ದಿ ಕೊಟ್ಟಿದ್ದಾರೆ.

Advertisement

ಬಿಜೆಪಿ ಸರ್ಕಾರದಲ್ಲಿ ಯೂನಿಟ್ ವೆಚ್ಚ ಹೆಚ್ಚಳಕ್ಕೆ ಒಳಗಾಗಿದ್ದ 12,153 ಕುಟುಂಬಗಳಿಗೆ ಸಿಹಿ ಸುದ್ದಿ ನೀಡಿದ್ದು, ಪ್ರತಿ ಮನೆಗೆ 1 ಲಕ್ಷ ರೂ. ನಂತೆ 121.53 ಕೋಟಿ ರೂ. ಸರ್ಕಾರವೇ ಭರಿಸಲು ಒಪ್ಪಿಗೆ ನೀಡಿದೆ ಎನ್ನಲಾಗಿದೆ.

ವಸತಿ ಸಚಿವ ಜಮೀರ್ ಅಹಮದ್ ಖಾನ್ ನೇತೃತ್ವದಲ್ಲಿ ಸಿಎಂ ಕಚೇರಿಯಲ್ಲಿ ನಡೆದ ಸಭೆಯಲ್ಲಿ ನಗರದ ಕಾಂಗ್ರೆಸ್ ಮತ್ತು ಬಿಜೆಪಿ ಶಾಸಕರು ಮುಖ್ಯಮಂತ್ರಿಗಳ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮುಖ್ಯಮಂತ್ರಿಗಳ 1 ಲಕ್ಷ ಮನೆ ಯೋಜನೆಗೆ 2017, ಸೆಪ್ಟೆಂಬರ್ 23 ರಂದು ಅಧಿಸೂಚನೆ ಹೊರಡಿಸಿ ಘಟಕ ವೆಚ್ಚ 6 ಲಕ್ಷ ರೂ. ನಿಗದಿ ಮಾಡಲಾಗಿತ್ತು. ಕೇಂದ್ರ ಸರ್ಕಾರ 1.50 ಲಕ್ಷ ರೂ., ರಾಜ್ಯ ಸರ್ಕಾರ ಸಾಮಾನ್ಯ ವರ್ಗಕ್ಕೆ 1.20 ಲಕ್ಷ ರೂ., ಎಸ್ಸಿ-ಎಸ್ಟಿ ವರ್ಗಕ್ಕೆ 2 ಲಕ್ಷ ರೂ. ನಿಗದಿಯಾಗಿತ್ತು.

ನಂತರ ಬಿ.ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಬಿಜೆಪಿ ಸರ್ಕಾರದಲ್ಲಿ ಘಟಕ ವೆಚ್ಚ 10 ಲಕ್ಷದ 60 ಸಾವಿರ ರೂ. ನಿಗದಿ ಮಾಡಲಾಗಿತ್ತು. ಇದಕ್ಕೆ 60 ಸಾವಿರ ರೂ. ಜಿಎಸ್‌ಟಿ ಸೇರಿ ಸೇರಿ 11.20 ಲಕ್ಷ ರೂ. ಆಗಿತ್ತು. ಇಷ್ಟು ಮೊತ್ತ ಭರಿಸಲು ಕಷ್ಟ ಎಂದು ಫಲಾನುಭವಿಗಳು ಸಚಿವರ ಬಳಿ ಮನವಿ ಮಾಡಿಕೊಂಡಿದ್ದರು.

ಇದೀಗ ಸರ್ಕಾರದ ಮಹತ್ವದ ತೀರ್ಮಾನದಿಂದ ಸಬ್ಸಿಡಿ ಹೊರತು ಪಡಿಸಿ ಸಾಮಾನ್ಯ ವರ್ಗ 7.50 ಲಕ್ಷ, ಎಸ್ಸಿ-ಎಸ್ಟಿ ವರ್ಗ 6.70ಲಕ್ಷ ರೂ. ಕಟ್ಟಬೇಕಾಗುತ್ತದೆ. ಇದರಿಂದ 12,153 ಕುಟುಂಬಗಳು ನೆಮ್ಮದಿಯ ನಿಟ್ಟುಸಿರು ಬಿಟ್ಟಂತಾಗಿದೆ. ಈ ಹಿಂದೆ ಕ್ರಮವಾಗಿ 8.50 ಲಕ್ಷ ರೂ. ಹಾಗೂ 7.70 ಲಕ್ಷ ರೂ. ಕಟ್ಟಬೇಕಿತ್ತು

ಈ ತೀರ್ಮಾನ 2020 ರಲ್ಲಿ ಘಟಕ ವೆಚ್ಚ ಹೆಚ್ಚಳ ತೀರ್ಮಾನದ ಅಧಿಸೂಚನೆ ಹೊರಡಿಸಿದ ಸಂದರ್ಭದಲ್ಲಿ ಪ್ರಾರಂಭಿಕ ಠೇವಣಿ ಮೊತ್ತ ಪಾವತಿ ಮಾಡಿರುವ 12,153 ಮಂದಿಗೆ ಮಾತ್ರ ಅನ್ವಯವಾಗಲಿದೆ.


Spread the love

LEAVE A REPLY

Please enter your comment!
Please enter your name here