ನವದೆಹಲಿ:- ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೆಚ್ಡಿ ದೇವೇಗೌಡ ಅವರು ವೀಲ್ಚೇರ್ನಲ್ಲಿ ಬಂದು ಇಂದು ಭೇಟಿ ಮಾಡಿದ್ದಾರೆ. ಈ ವೇಳೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಉಪಸ್ಥಿತರಿದ್ದು, ಮಹತ್ವದ ಚರ್ಚೆ ಮಾಡಲಾಗಿದೆ.
ಈ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, ಲೋಕಕಲ್ಯಾಣ ಮಾರ್ಗವಾಗಿ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರನ್ನು ಭೇಟಿ ಮಾಡಿರುವುದು ಗೌರವದ ಸಂಗತಿ. ವಿವಿಧ ವಿಷಯಗಳ ಬಗ್ಗೆ ಅವರಿಗಿರುವ ಬುದ್ಧಿವಂತಿಕೆ ಮತ್ತು ದೃಷ್ಟಿಕೋನವು ತುಂಬಾ ಆಳ ಮತ್ತು ಮೌಲ್ಯಯುತವಾದದ್ದು.
ಅವರು ನನಗೆ ನೀಡಿದ ಕಲಾಕೃತಿಗೆ ನಾನು ಕೃತಜ್ಞನಾಗಿದ್ದೇನೆ. ಇದು ನನ್ನ ಇತ್ತೀಚಿನ ಕನ್ಯಾಕುಮಾರಿ ಭೇಟಿಯನ್ನು ನೆನಪಿಸಿತು ಎಂದು ತಮ್ಮ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಇನ್ನೂ ಇತ್ತೀಚೆಗೆ ಕೇಂದ್ರ ಸರ್ಕಾರ ಬಜೆಟ್ ಮಂಡಿಸಿದ್ದು, ಪ್ರತ್ಯೇಕವಾಗಿ ಕರ್ನಾಟಕಕ್ಕೆ ಏನು ಘೋಷಿಸಿರಲಿಲ್ಲ. ಹಾಗಾಗಿ ಟೀಕೆ ಕೂಡ ವ್ಯಕ್ತವಾಗಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಹೆಚ್ಡಿ ಕುಮಾರಸ್ವಾಮಿ ಬೇರೆ ಬೇರೆ ಯೋಜನೆಗಳನ್ನು ಕರ್ನಾಟಕ್ಕೆ ತರುವ ಬಗ್ಗೆ ಪ್ರಸ್ತಾಪಿಸಿದ್ದರು. ಅದರ ಬೆನ್ನೆಲ್ಲೇ ಇದೀಗ ಪ್ರಧಾನಿ ಮೋದಿ ಭೇಟಿ ಮಾಡಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.