ಶಿವಮೊಗ್ಗ: ಮಳೆಗಾಲ ಬಂತೆದರೆ ಅನಾರೋಗ್ಯದ ಸಮಸ್ಯೆಗಳು ತುಸು ಹೆಚ್ಚಾಗುತ್ತದೆ. ರಾಜ್ಯದಲ್ಲಿ ವೈರಲ್ ಫೀವರ್, ಡೆಂಗ್ಯೂ, ಇಲಿ ಜ್ವರ, ಮಲೇರಿಯಾ ಇನ್ನಿತರ ಜ್ವರ ಪ್ರಕರಣಗಳು ಕಾಣಿಸಿಕೊಂಡಿದೆ. ಈಗ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಸಂಕ್ಲಾಪುರ ಗ್ರಾಮದ ಯುವತಿ ಇಲಿ ಜ್ವರಕ್ಕೆ ಬಲಿಯಾಗಿದ್ದಾರೆ.
ಹೌದು ಶಿವಮೊಗ್ಗದ ಖಾಸಗಿ ಕಾಲೇಜಿನಲ್ಲಿ ಪದವಿ ಓದುತ್ತಿದ್ದ ಪಲ್ಲವಿ(21) ಅವರಿಗೆ ಜುಲೈ 9ರಂದು ಜ್ವರ ಕಾಣಿಸಿಕೊಂಡಿತ್ತು. ಕೂಡಲೇ ಹತ್ತಿರದ ಶಿಕಾರಿಪುರ ಸರ್ಕಾರಿ ಆಸ್ಪತ್ರೆಯಲ್ಲಿ ಪಲ್ಲವಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ, ನಂತರ ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿಯೇ ಯುವತಿ ಮೃತಪಟ್ಟಿದ್ದಾರೆ.



