ವಿಜಯಸಾಕ್ಷಿ ಸುದ್ದಿ, ಗದಗ : ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಮ್ಮ ಮನ್ ಕೀ ಬಾತ್‌ನಲ್ಲಿ ಶ್ಲಾಘಿಸಿರುವ ನಗರದ ಕಲಾಚೇತನ ಸಾಂಸ್ಕೃತಿಕ ಆಕಾಡೆಮಿ ವತಿಯಿಂದ ಜುಲೈ 28ರ ಸಂಜೆ 6 ಗಂಟೆಗೆ ನಗರದ ತೋಂಟದಾರ್ಯ ಕಲ್ಯಾಣಕೇಂದ್ರದಲ್ಲಿ `ಯಕ್ಷ ಸಂಭ್ರಮ’ ಕಾರ್ಯಕ್ರಮ ಜರುಗಲಿದೆ. ಕಾರ್ಯಕ್ರಮವನ್ನು ಪ್ರಸಿದ್ಧ ತಾಳ ಮದ್ದಲೆ ಕಲಾವಿದರಾದ ಮೋಹನ ಭಾಸ್ಕರ ಹೆಗಡೆ ಉದ್ಘಾಟಿಸಿ ಪ್ರಶಸ್ತಿ ಪ್ರದಾನ ನೆರವೇರಿಸುವರು.
ಬೆಂಗಳೂರಿನ ಚಲನಚಿತ್ರ ರಂಗಭೂಮಿ ಕಲಾವಿದರಾದ ರಾಮಕೃಷ್ಣ ನೀರ್ನಳ್ಳಿ, ವೈದ್ಯರು ಹಾಗೂ ಕ್ರೀಡಾಪಟುಗಳಾದ ಡಾ. ಜಿ.ಬಿ ಬಿಡಿನಹಾಳ, ಕುಂದಾಪುರದ ಯಕ್ಷಗಾನ ಕಲಾವಿದರಾದ ರಾಘವೇಂದ್ರ ಮಯ್ಯ ಅವರಿಗೆ ಕಲಾಚೇತನ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಮುಖ್ಯ ಅತಿಥಿಗಳಾಗಿ ತೋಂಟದಾರ್ಯ ಸಂಸ್ಥಾನಮಠದ ಆಡಳಿತಾಧಿಕಾರಿ ಎಸ್.ಎಸ್. ಪಟ್ಟಣಶೆಟ್ಟಿ, ನಗರಸಭೆ ನಿಕಟಪೂರ್ವ ಅಧ್ಯಕ್ಷರಾದ ಉಷಾ ದಾಸರ ಆಗಮಿಸುವರು.
ಕುಂದಾಪುರದ ಹಾಲಾಡಿಯ ಮಹಾಗಣಪತಿ ಪ್ರವಾಸಿ ಯಕ್ಷಗಾನ ಮಂಡಳಿಯಿಂದ ಯಕ್ಷ ಸಂಭ್ರಮ ಯಕ್ಷಗಾನ ಜರುಗುವುದು. ಈ ಕಾರ್ಯಕ್ರಮಕ್ಕೆ ಕಲಾಸಕ್ತರು ಆಗಮಿಸಲು ಕಲಾಚೇತನ ಸಾಂಸ್ಕೃತಿಕ ಆಕಾಡೆಮಿ ಅಧ್ಯಕ್ಷ ಡಾ. ಕಾವೆಂಶ್ರೀ ವಿನಂತಿಸಿದ್ದಾರೆ.