ವಿಜಯಸಾಕ್ಷಿ ಸುದ್ದಿ, ಗದಗ : ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ಗದಗ ಜಿಲ್ಲಾ ಮಾಜಿ ಸೈನಿಕರ ಸಂಘ, ಮಾಜಿ ಹಾಗೂ ಹಾಲಿ ಪ್ಯಾರಾಮಿಲಿಟರಿ ಯೋಧರ ಕಲ್ಯಾಣ ಸಂಘ ಇವರ ಸಹಯೋಗದೊಂದಿಗೆ 25ನೇ ಕಾರ್ಗಿಲ್ ವಿಜಯೋತ್ಸವದ ರಜತಮಹೋತ್ಸವ ಹಾಗೂ 1962, 1965, 1971 ಮತ್ತು 1999ರ ಯುದ್ಧದಲ್ಲಿ ಹುತಾತ್ಮ ವೀರಯೋಧರಿಗೆ ಗೌರವ ನಮನ ಕಾರ್ಯಕ್ರಮ ಜರುಗಿತು.
ಈ ರ‍್ಯಾಲಿಯಲ್ಲಿ ಅಲ್ ಇಂಡಿಯಾ ಬಂಜಾರ ಸೇವಾ ಸಂಘದ ತಾಲೂಕಾ ಸಂಘಟನಾ ಕಾರ್ಯದರ್ಶಿ ಶಿವಾಜಿ ಚವ್ಹಾಣ ಸೇರಿದಂತೆ ನಗರದ ಶಾಲಾ-ಕಾಲೇಜು ವಿದ್ಯಾರ್ಥಿಗಳು, ದೇಶಪ್ರೇಮಿಗಳು, ಸಮಾಜಸೇವಕರು, ಎನ್.ಸಿ.ಸಿ. ವಿದ್ಯಾರ್ಥಿಗಳು, ಮಹಿಳೆಯರು ಪಾಲ್ಗೊಂಡಿದ್ದರು. ಈ ರ‍್ಯಾಲಿಯನ್ನು ನಗರದ ಕಿತ್ತೂರು ಚನ್ನಮ್ಮ ಸರ್ಕಲ್‌ನಲ್ಲಿ ಪ್ರಾರಂಭವಾಗಿ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಲಾಯಿತು.



