ಬೆಂಗಳೂರು:– ಕೋರಮಂಗಲದ ಪಿಜಿಯಲ್ಲಿ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿದ್ದ ಆರೋಪಿಯನ್ನು ಮಧ್ಯಪ್ರದೇಶದಲ್ಲಿ ಅರೆಸ್ಟ್ ಮಾಡಲಾಗಿದೆ.
Advertisement
ಕೊನೆಗೂ ಆರೋಪಿ ಅಭಿಷೇಕ್ ನ ಎಡೆಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ಕೋರಮಂಗಲದ ಪಿಜಿಯಲ್ಲಿ ಕೃತಿ ಕುಮಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಕೊಲೆ ಆರೋಪಿ ಅಭಿಷೇಕ್ನನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ. ಜುಲೈ 23ರ ರಾತ್ರಿ ಚಾಕುವಿನಿಂದ ಇರಿದು ಕೃತಿ ಕುಮಾರಿಯನ್ನು ಹತ್ಯೆಗೈದಿದ್ದ ಅಭಿಷೇಕ್, ಮಧ್ಯ ಪ್ರದೇಶಕ್ಕೆ ಹೋಗಿ ತಲೆ ಮರೆಸಿಕೊಂಡಿದ್ದ. ಸದ್ಯ ಮಧ್ಯ ಪ್ರದೇಶದಲ್ಲೇ ಆರೋಪಿಯನ್ನು ಬಂಧಿಸಲಾಗಿದೆ.