ಬೆಳಗಾವಿ: ಮನೆಗೆ ನೀರು ನುಗ್ಗಿದ ವಿಚಾರ ಕೇಳಿ ಹೃದಯಾಘಾತದಿಂದ ಮನೆ ಯಜಮಾನ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯಗೋಕಾಕ್ ನಗರದ ಉಪ್ಪಾರ ಗಲ್ಲಿಯಲ್ಲಿ ನಿನ್ನೆಸಂಜೆ ನಡೆದಿದೆ. ದಶರಥ ಬಂಡಿ(80) ಮೃತಪಟ್ಟ ಮನೆ ಯಜಮಾನ. ಇನ್ನು ಮನೆಗೆ ನೀರು ಬರುವ ವಿಚಾರ ತಿಳಿದು ಕೊನೆಯುಸಿರೆಳೆದ ದಶರಥ ಅವರನ್ನು ನಿನ್ನೆ ರಾತ್ರಿ ಅಂತ್ಯಸಂಸ್ಕಾರ ಮಾಡಿ ಮನೆಗೆ ಹೋಗುವಷ್ಟರಲ್ಲಿ ಮನೆ ಸಂಪೂರ್ಣ ಮುಳುಗಿದೆ.
Advertisement
ರಾತ್ರೋರಾತ್ರಿ ಉಟ್ಟ ಬಟ್ಟೆಯಲ್ಲೇ ಹೊರ ಬಂದಿದ್ದೇವೆ ಎಂದು ಮೃತ ಕುಟುಂಬ ಅಳಲು ತೋಡಿಕೊಳ್ಳುತ್ತಿದೆ. ಕೂಡಲೇ ಮಕ್ಕಳು, ನಾಯಿ ಮರಿಗಳ ಜೊತೆಗೆ ಕಾಳಜಿ ಕೇಂದ್ರಕ್ಕೆ ಶಿಪ್ಟ್ ಮಾಡಲಾಗಿದೆ. ಮನೆಯ ಯಜಮಾನ ಕಳೆದುಕೊಂಡ ಕುಟುಂಬದ ಸ್ಥಿತಿ ಅಯೋಮಯವಾಗಿದೆ. ಮೃತಪಟ್ಟ ಬಳಿಕ ಕಾರ್ಯಗಳನ್ನೂ ಮಾಡಲಾಗದೇ ಕುಟುಂಬ ಪರದಾಟ ನಡೆಸಿದೆ. ಇನ್ನು ಈ ಮೂಲಕ ಹದಿನೇಳು ಜನರು ಕಾಳಜಿ ಕೇಂದ್ರದಲ್ಲಿ ವಾಸ್ತವ್ಯ ಹೂಡಿದ್ದಾರೆ.