ರಾಹುಲ್ ಗಾಂಧಿ ಮಾತಿಗೆ ಹಣೆ ಚಚ್ಚಿಕೊಂಡ ನಿರ್ಮಲಾ ಸೀತಾರಾಮನ್!

0
Spread the love

ನವದೆಹಲಿ:- ಇಂದು ಸಂಸತ್ತಿನ ಮುಂಗಾರು ಅಧಿವೇಶನದ ಒಂಬತ್ತನೇ ದಿನದಲ್ಲಿ ರಾಹುಲ್ ಗಾಂಧಿ ಮಾತಿಗೆ ನಿರ್ಮಲಾ ಸೀತಾರಾಮನ್ ಹಣೆ ಚಚ್ಚಿಕೊಂಡಿದ್ದಾರೆ.

Advertisement

ಕೇಂದ್ರ ಬಜೆಟ್ ಕುರಿತು ಮಾತನಾಡುತ್ತಿದ್ದ ರಾಹುಲ್ ಗಾಂಧಿ, ಹಲ್ವಾ ಕಾರ್ಯಕ್ರಮದ ಫೋಟೋ ಪ್ರದರ್ಶನ ಮಾಡಿದಾಗ ನಿರ್ಮಲಾ ಸೀತಾರಾಮನ್ ಅವರು ನಗುತ್ತಾ ಮುಖ ಮುಚ್ಚಿಕೊಂಡರು. ಇದೀಗ ಈ ವಿಡಿಯೋ ಎಲ್ಲೆಡೆ ವೈರಲ್ ಆಗತೊಡಗಿದೆ ಅಲ್ಲದೇ ಹಲವು ಪರ ವಿರೋಧ ಟೀಕೆಗಳು ವ್ಯಕ್ತವಾಗಿವೆ. ಕೇಂದ್ರ ಬಜೆಟ್ ನ್ನು ಮಧ್ಯಮ ವರ್ಗ, ಹಿಂದುಳಿದ ವರ್ಗಗಳ ವಿರೋಧಿ ಬಜೆಟ್ ಎಂದು ರಾಹುಲ್ ಗಾಂಧಿ ತಮ್ಮ ಭಾಷಣದಲ್ಲಿ ಟೀಕಾ ಪ್ರಹಾರ ನಡೆಸಿದರು.

ರಾಹುಲ್ ಗಾಂಧಿ ಬಜೆಟ್ ಪೂರ್ವದಲ್ಲಿ ನಡೆಯುವ ಸಾಂಪ್ರದಾಯಿಕ ಹಲ್ವಾ ಸಮಾರಂಭದ ಪೋಸ್ಟರ್ ನ್ನು ಪ್ರದರ್ಶಿಸಿದ್ದು, ಬಜೆಟ್ ತಯಾರಿಕೆಯ ತಂಡದಲ್ಲಿದ್ದ 20 ಅಧಿಕಾರಿಗಳ ಪೈಕಿ ದಲಿತರು, ಒಬಿಸಿ, ಆದಿವಾಸಿಗಳು ಇಲ್ಲವೇ ಇಲ್ಲ. 20 ಅಧಿಕಾರಿಗಳ ಪೈಕಿ ಯಾರೊಬ್ಬರೂ ಹಿಂದುಳಿದ ವರ್ಗ, ದಲಿತ ಹಾಗೂ ಆದಿವಾಸಿ ಸಮುದಾಯಕ್ಕೆ ಸೇರಿದವರು ಇಲ್ಲ. ನಾನು ಬೇಕಿದ್ದರೆ ಅವರ ಹೆಸರುಗಳನ್ನೂ ಹೇಳಬಲ್ಲೆ ಎಂದರು. ಈ ವೇಳೆ ರಾಹುಲ್ ಗಾಂಧಿ ಈ ಹೇಳಿಕೆ ನೀಡುತ್ತಿದ್ದಂತೆ ನಿರ್ಮಲಾ ಸೀತಾರಾಮನ್ ಅವರು ಹಣೆ ಚಚ್ಚಿಕೊಂಡು, ತಮ್ಮ ಎರಡೂ ಕೈಗಳಿಂದ ಮುಖ ಮುಚ್ಚಿಕೊಂಡು ನಕ್ಕರು.

ಮಹಾಭಾರತದ ಚಕ್ರವ್ಯೂಹವನ್ನು ಉಲ್ಲೇಖಿಸಿದ ರಾಹುಲ್‌ ಗಾಂಧಿ ಅವರು ನರೇಂದ್ರ ಮೋದಿ ಹಾಗೂ ಬಿಜೆಪಿ ವಿರುದ್ಧ ವಾಗ್ಬಾಣ ಪ್ರಯೋಗಿಸಿದ್ದಾರೆ. “ಮಹಾಭಾರತದ ಚಕ್ರವ್ಯೂಹದಂತೆ ಈಗಲೂ ಒಂದು ಚಕ್ರವ್ಯೂಹ ರಚಿಸಲಾಗಿದೆ. ದೇಶದ ಜನರು ಆ ಚಕ್ರವ್ಯೂಹಕ್ಕೆ ಸಿಲುಕಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸೇರಿ 6 ಮಂದಿಯು ಈ ಚಕ್ರವ್ಯೂಹವನ್ನು ನಿಯಂತ್ರಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here