ಚಿಕ್ಕೋಡಿ: ಮುಡಾ ಹೋರಾಟವು ಸಿದ್ದರಾಮಯ್ಯ ಅವರನ್ನು ಇಳಿಸಿ, ಡಿಕೆ ಶಿವಕುಮಾರ್ ಅವರನ್ನು ಸಿಎಂ ಮಾಡಲು ಬಿ ವೈ ವಿಜಯೇಂದ್ರ ಮಾಡುತ್ತಿರುವ ಹೋರಾಟ ಅನ್ನೋದು ಬಹಿರಂಗ ಪಡಿಸಬೇಕು ಎಂದು ಬಸನಗೌಡಾ ಪಾಟೀಲ ಯತ್ನಾಳ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಮುಡಾ ಹೋರಾಟವು ಸಿದ್ದರಾಮಯ್ಯ ಅವರನ್ನು ಇಳಿಸಿ,
Advertisement
ಡಿಕೆ ಶಿವಕುಮಾರ್ ಅವರನ್ನು ಸಿಎಂ ಮಾಡಲು ಬಿ ವೈ ವಿಜಯೇಂದ್ರ ಮಾಡುತ್ತಿರುವ ಹೋರಾಟ ಅನ್ನೋದು ಬಹಿರಂಗ ಪಡಿಸಬೇಕು. ಡಿಸಿಎಂ ಡಿಕೆ ಶಿವಕುಮಾರ್ ಆದೇಶದಂತೆ ವಿಜಯೇಂದ್ರ ಪಾದಯಾತ್ರೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಇಳಿಸಲು ಪಾದಯಾತ್ರೆ ಮಾಡ್ತಿದ್ದಾರೆ. ಈ ಪಾದಯಾತ್ರೆಯಲ್ಲಿ ಹೊಂದಾಣಿಕೆ ರಾಜಕಾರಣ ಇದೆ. ಡಿ.ಕೆ. ಶಿವಕುಮಾರ್ ಅವರ ಉಪಕಾರ ತೀರಿಸಲಿಕ್ಕೆ ಇವತ್ತು ವಿಜಯೇಂದ್ರ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಬಸನಗೌಡಾ ಪಾಟೀಲ ಯತ್ನಾಳ್ ತಿಳಿಸಿದ್ದಾರೆ.