HomeKarnataka Newsಪುನೀತ್ ಕೆರೆಹಳ್ಳಿಗೆ ಷರತ್ತುಬದ್ಧ ಜಾಮೀನು ಮಂಜೂರು

ಪುನೀತ್ ಕೆರೆಹಳ್ಳಿಗೆ ಷರತ್ತುಬದ್ಧ ಜಾಮೀನು ಮಂಜೂರು

For Dai;y Updates Join Our whatsapp Group

ಜೈಪುರದಿಂದ ಬೆಂಗಳೂರಿಗೆ ಆಮದಾಗುತ್ತಿದ್ದ ಕುರಿ ಮಾಂಸದಲ್ಲಿ ನಾಯಿ ಮಾಂಸ ಮಿಶ್ರಿತವಾಗಿದೆ ಎಂದು ಆರೋಪಿಸಿದ್ದ ಪುನೀತ್ ಕೆರೆಹಳ್ಳಿ ನೇತೃತ್ವದ ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಸದಸ್ಯರು ಜುಲೈ 26ರಂದು ಮೆಜೆಸ್ಟಿಕ್ ರೈಲ್ವೆ ನಿಲ್ದಾಣಕ್ಕೆ ಬಂದಿಳಿದ ಮಾಂಸದ ಬಾಕ್ಸ್​ಗಳನ್ನು ತಡೆದು ಪ್ರತಿಭಟಿಸಿದ್ದರು.

ಈ ಘಟನೆ ಸಂಬಂಧ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಬಂಧನಕ್ಕೊಳಗಾಗಿದ್ದ ಹಿಂದೂ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿಗೆ ನಗರದ 5ನೇ ಎಸಿಎಂಎಂ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಈ ವೇಳೆ ಪರಿಸ್ಥಿತಿ ನಿಯಂತ್ರಣಕ್ಕೆ ಯತ್ನಿಸಿದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಪುನೀತ್ ಕೆರೆಹಳ್ಳಿಯನ್ನು ಕಾಟನ್ ಪೇಟೆ ಠಾಣಾ ಪೊಲೀಸರು ಬಂಧಿಸಿದ್ದರು. ಸದ್ಯ ಪುನಿತ್ ಕೆರೆಹಳ್ಳಿಯಗೆ ಜಾಮೀನು ನೀಡಿರುವ ನ್ಯಾಯಾಲಯ ಪ್ರತಿ ತಿಂಗಳ ಮೊದಲ ಭಾನುವಾರ ಠಾಣೆಗೆ ಹಾಜರಾಗಿ ಸಹಿ ಹಾಕಬೇಕು, ವಿದೇಶ ಪ್ರಯಾಣ ಮಾಡಬಾರದು ಎಂಬ ಷರತ್ತುಗಳನ್ನ ವಿಧಿಸಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img