ಕ್ರಿಕೆಟ್ ಲೋಕದಲ್ಲಿ ಈಗ ಇಂಡಿಯನ್ ಪ್ರೀಮಿಯರ್ ಲೀಗ್ನದ್ದೇ ಸದ್ದು ಜೋರಾಗಿದೆ.ವರ್ಷದ ಕೊನೆಗೆ ನಡೆಯಲಿರುವ 2025ರ ಐಪಿಎಲ್ ಮೆಗಾ ಹರಾಜಿಗೂ ಮುನ್ನವೇ RCB ಅಭಿಮಾನಿಗಳಿಗೆ ಬಿಗ್ ಶಾಕ್ ಎದುರಾಗಿದೆ.
ಈ ಬಾರಿ RCB ತಂಡದಲ್ಲಿ ಸಾಕಷ್ಟು ಬದಲಾವಣೆ ಮಾಡಲು ಆಡಳಿತ ಮಂಡಳಿ ಮುಂದಾಗಿದ್ದು ಉತ್ತಮ ಪ್ರದರ್ಶನ ನೀಡದ ದುಬಾರಿ ಆಟಾಗರರನ್ನು ಕೈಬಿಡಲು ಮುಂದಾಗಿದೆ. ಸ್ಫೋಟಕ ಬ್ಯಾಟರ್ ಗ್ಲೆನ್ ಮ್ಯಾಕ್ಸ್‌ವೆಲ್‌ರನ್ನು ಆರ್ ಸಿಬಿ ಕೈಬಿಡುವುದು ಬಹುತೇಕ ಖಚಿತವಾಗಿದ್ದು, ಅದಕ್ಕೆ ಸಾಕ್ಷಿ ಎನ್ನುವಂತೆ ಗ್ಲೆನ್ ಮ್ಯಾಕ್ಸ್ ವೆಲ್ ಆರ್ ಸಿಬಿ ತಂಡದ ಇನ್‌ಸ್ಟಾಗ್ರಾಂ ಹ್ಯಾಂಡಲ್ ಅನ್ನು ಅನ್ ಫಾಲೋ ಮಾಡಿದ್ದಾರೆ.
ಈ ಬಾರಿಯ IPL ಮೆಗಾ ಹರಾಜಿಗೂ ಮುನ್ನ ಭಯಂಕರ ಸುದ್ದಿಯೊಂದು ಹೊರ ಬಿದ್ದಿದೆ. ಸ್ಫೋಟಕ ಬ್ಯಾಟರ್ ಗ್ಲೆನ್ ಮ್ಯಾಕ್ಸ್‌ವೆಲ್‌ರನ್ನು ಆರ್ ಸಿಬಿ ಕೈಬಿಡುವುದು ಬಹುತೇಕ ಖಚಿತವಾಗಿದೆ.
ಕಳೆದ ಮೂರು ವಾರಗಳ ಹಿಂದೆಯೇ ಮ್ಯಾಕ್ಸ್ವೆಲ್ಗೆ ಆರ್ಸಿಬಿ ಈ ಮಾಹಿತಿ ನೀಡಿದೆ. ಇದರಿಂದ ಸಿಟ್ಟಿಗೆದ್ದ ಸ್ಟಾರ್ ಆಲ್ರೌಂಡರ್ ಮ್ಯಾಕ್ಸ್ವೆಲ್ ಆರ್ಸಿಬಿಯನ್ನು ಇನ್ಸ್ಟಾಗ್ರಾಮ್ನಲ್ಲಿ ಮಾತ್ರವಲ್ಲ ಟ್ವಿಟರ್ನಲ್ಲೂ ಅನ್ಫಾಲೋ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
ಮುಂಬರುವ 2025ರ ಇಂಡಿಯನ್ ಪ್ರೀಮಿಯರ್ ಲೀಗ್ಗಾಗಿ ಇಡೀ ಕ್ರೀಡಾ ಜಗತ್ತೇ ಕಾಯುತ್ತಿದೆ. ಈ ವರ್ಷದ ಕೊನೆಗೆ 2025ರ ಐಪಿಎಲ್ ಮೆಗಾ ಆಕ್ಷನ್ ನಡೆಯಲಿದೆ. ಇದಕ್ಕೂ ಮುನ್ನವೇ ಐಪಿಎಲ್ ತಂಡಗಳು ತಮಗೆ ಬೇಕಾದ ಆಟಗಾರರನ್ನು ರೀಟೈನ್ ಮಾಡಿಕೊಳ್ಳಬಹುದು. ಬಳಿಕ ಉಳಿದ ಆಟಗಾರರನ್ನು ಆಕ್ಷನ್ಗಾಗಿ ಬಿಡಲೇಬೇಕಿದೆ.
ಇನ್ನು, ಆರ್ಸಿಬಿ ತಂಡವು ವಿರಾಟ್ ಕೊಹ್ಲಿ ಹೊರತುಪಡಿಸಿ ಮತ್ಯಾರನ್ನ ರೀಟೈನ್ ಮಾಡಿಕೊಳ್ಳಲಿದೆ ಎಂದು ಇದುವರೆಗೂ ಸ್ಪಷ್ಟನೆ ನೀಡಿಲ್ಲ. ರೀಟೈನ್ ಲಿಸ್ಟ್ನಲ್ಲಿ ಕೊಹ್ಲಿ ಜೊತೆಗೆ ವಿಲ್ ಜಾಕ್ಸ್, ಮೊಹಮ್ಮದ್ ಸಿರಾಜ್ ಇದೆ ಎಂದು ಹೇಳಲಾಗುತ್ತಿದೆ