HomeGadag Newsವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಯಲಿ

ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಯಲಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ : ಶಿಕ್ಷಣ ನಿಂತ ನೀರಲ್ಲ. ವಿದ್ಯಾರ್ಥಿಗಳು ನೂತನ ಆವಿಷ್ಕಾರಗಳನ್ನು ತಮ್ಮ ಶೈಕ್ಷಣಿಕ ಅಧ್ಯಯನದಲ್ಲಿ ಅಳವಡಿಸಿಕೊಳ್ಳುವ ಮೂಲಕ ವೈಜ್ಞಾನಿಕ ಮನೋಭಾವನೆ, ಚಿಂತನೆಗಳನ್ನು ಬೆಳೆಸಿಕೊಳ್ಳಬೇಕೆಂದು ಶಿಕ್ಷಣ ಪ್ರೇಮಿ, ತ್ಯಾಗಜೀವಿ ಶ್ರೀ ಬಿ.ಜಿ.ಅಣ್ಣಿಗೇರಿ ಗುರುಗಳ ಪ್ರತಿಭಾ ಪ್ರತಿಷ್ಠಾನದ ಅಧ್ಯಕ್ಷ ಶಿವಕುಮಾರ ಎಚ್.ಪಾಟೀಲ ಹೇಳಿದರು.
ಅವರು ಗದಗ ತಾಲೂಕಿನ ಕೋಟುಮಚಗಿ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಣ ಪ್ರೇಮಿ, ತ್ಯಾಗಜೀವಿ ಬಿ.ಜಿ. ಅಣ್ಣಿಗೇರಿ ಗುರುಗಳ ಪ್ರತಿಭಾ ಪ್ರತಿಷ್ಠಾನವು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮೊದಲ ಮೂರು ಸ್ಥಾನಗಳನ್ನು ಪಡೆದ ಗದಗ ತಾಲೂಕಿನ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದರು.
ಪ್ರತಿಷ್ಠಾನದ ಉಪಾಧ್ಯಕ್ಷ ಶಂಕ್ರಪ್ಪ ಅಣ್ಣಿಗೇರಿ ಮಾತನಾಡಿ, ಶಿಕ್ಷಣ ಕಲಿತ ವ್ಯಕ್ತಿ ಎಲ್ಲರಿಂದಲೂ ಎಲ್ಲ ಕಡೆಯೂ ಗೌರವಿಸಲ್ಪಡುತ್ತಾನೆ. ಅದಕ್ಕಾಗಿ ವಿದ್ಯಾರ್ಥಿಗಳು ಚಿಕ್ಕ ವಯಸ್ಸಿನಲ್ಲಿ ಓದಿನತ್ತ ಗಮನವಿಡಬೇಕು. ಓದು ನಿಮ್ಮನ್ನು ಉನ್ನತಿಗೇರಿಸುತ್ತದೆ ಎಂದರು.
ಪ್ರತಿಷ್ಠಾನದ ಕಾರ್ಯದರ್ಶಿ ಶಿವಪ್ಪ ಕತ್ತಿ, ಅಧ್ಯಕ್ಷತೆ ವಹಿಸಿದ್ದ ಶಾಲೆಯ ಮುಖ್ಯೋಪಾಧ್ಯಾಯ ವಿನಾಯಕ ಬಂಡಾಮಾತನಾಡಿದರು.
ಕೋಟುಮಚಗಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಲಲಿತಾ ಸಂಕನಗೌಡ್ರ, ಜೀವನಸಾಬ ವಡ್ಡಟ್ಟಿ, ಶಿಲ್ಪಾ ಸಿಂಗಟಾಲಕೇರಿ, ಅನಿತಾ ವಾಲ್ಮೀಕಿ, ತೇಜಸ್ವಿನಿ ತಳವಾರ ಪುರಸ್ಕಾರ ನೀಡಿ ಗೌರವಿಸಲಾಯಿತು.
ನೀರಲಗಿಯ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ನೀಲಮ್ಮ ಇಬ್ರಾಹಿಂಪೂರ, ಪ್ರಥ್ವಿರಾಜ ಹುರಕಡ್ಲಿ, ನಿರ್ಮಲಾ ಪಾಟೀಲ, ಅನೀಲ ಬಾವಿ, ಭಾಗ್ಯಲಕ್ಷ್ಮಿ ಬಡಿಗೇರ ಹಾಗೂ ಕಣಗಿನಹಾಳದ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಾದ ರೋಪಾ ಮಲಕಶೆಟ್ಟಿ, ಧರ್ಮರಾಜ ಭಜಪ್ಪನವರ, ಸಂಗೀತಾ ಜೀರ್ಲಿ, ಐಶ್ವರ್ಯ ಆವಾರಿ, ಯಶೋಧಾ ಪಾಟೀಲ ಅವರಿಗೆ ಪುರಸ್ಕಾರ ನೀಡಿ ಗೌರವಿಸಲಾಯಿತು.
ಕಣಗಿನಹಾಳ ಗ್ರಾಮದ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿಗಳಾದ ಅಭಿಲಾಷಗೌಡ ಕರಕನಗೌಡ್ರ, ರಾಹುಲ್ ಲಮಾಣಿ, ಅನ್ನಪೂರ್ಣ ಮೊರಬದ, ಪ್ರಜ್ವಲ ದಿವಾಣದ, ಗಗನ ನಾಯಕ ಹಾಗೂ ಹಾತಲಗೇರಿ ಗ್ರಾಮದ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಾದ ಕರಿಯಪ್ಪ ಕುರುಬರ, ರೇಣುಕಾ ಗದಗ, ಗೀತಾ ಜೋಗಿನ, ಸತ್ಯಮ್ಮ ಮುರ್ಲಾಪೂರ, ಚಂದನಾ ಪಾಟೀಲ ಅವರುಗಳಿಗೆ ಪುರಸ್ಕಾರ ನೀಡಿ ಗೌರವಿಸಲಾಯಿತು.
ಪ್ರತಿಷ್ಠಾನದ ಗೌರವ ಅಧ್ಯಕ್ಷರಾದ ಪೂಜ್ಯ ಜ.ಡಾ.ತೋಂಟದ ಸಿದ್ಧರಾಮ ಮಹಾಸ್ವಾಮಿಗಳ ಕೃಪಾಶೀರ್ವಾದಿಂದ ಪ್ರತಿಷ್ಠಾನದ ಉಪಾಧ್ಯಕ್ಷ ಶಂಕ್ರಪ್ಪ ಅಣ್ಣಿಗೇರಿ, ಕಾರ್ಯದರ್ಶಿ ಶಿವಪ್ಪ ಕತ್ತಿ, ಖಜಾಂಚಿ ಸಿದ್ಧಲಿಂಗನಗೌಡ ಪಾಟೀಲ, ನಿರ್ದೆಶಕರಾದ ಶಿವಾನಂದ ದಂಡಿನ, ವಿರುಪಾಕ್ಷಪ್ಪ ಮ್ಯಾಗೇರಿ, ಚನ್ನಪ್ಪ ಮಲ್ಲಾಡದ, ತೋಂಟೇಶ ವೀರಲಿಂಗಯ್ಯನಮಠ, ವಿರುಪಾಕ್ಷಪ್ಪ ಶಾಂತಗೇರಿ, ಕಳಕಪ್ಪ ಕುರ್ತಕೋಟಿ ಸಹಕರಿಸಿದರು.
ಕಳೆದ 10 ವರ್ಷಗಳಿಂದ ಪ್ರತಿಷ್ಠಾನವು ಪ್ರತಿಭಾ ಪುರಸ್ಕಾರ ನೀಡುತ್ತ ಬಂದಿದ್ದು, ದಾನಿಯೊಬ್ಬರು ಈ ಕಾರ್ಯಕ್ಕೆ ಕೈ ಜೋಡಿಸಿದ್ದರಿಂದ ಪ್ರತಿಷ್ಠಾನಕ್ಕೆ ಬಲ ಬಂದಿದೆ. 30 ಶಾಲೆಗಳಲ್ಲಿ ತಲಾ ಐವರು ಪ್ರತಿಭಾನ್ವಿತರನ್ನು ಸನ್ಮಾನಿಸಿದ್ದು, ಪ್ರತಿಭಾ ಪುರಸ್ಕಾರಕ್ಕಾಗಿ ಒಟ್ಟು 1 ಲಕ್ಷ 20 ಸಾವಿರಕ್ಕೂ ಹೆಚ್ಚು ನಗದು, ಸುಮಾರು 60 ಸಾವಿರ ರೂ. ಮೌಲ್ಯದ ಬ್ಯಾಗ್, ಪ್ರಮಾಣಪತ್ರ ಹಾಗೂ ಅರ್ಧ ಕ್ವಿಂಟಲ್‌ಗಿಂತಲೂ ಹೆಚ್ಚು ಪ್ರಮಾಣದ ಧಾರವಾಡ ಪೇಡಾವನ್ನು ಈ ಕಾರ್ಯಕ್ಕೆ ಬಳಕೆ ಮಾಡಲಾಗಿದೆ ಎಂದು ಶಿವಕುಮಾರ ಎಚ್.ಪಾಟೀಲ ತಿಳಿಸಿದರು.

Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!