ಟಿಬಿ‌ ಡ್ಯಾಂಗೆ ಹರಿದು ಬಂದ ಅಪಾರ ಪ್ರಮಾಣದ ನೀರು: 22 ಗ್ರಾಮಗಳಲ್ಲಿ ಎದುರಾದ ಪ್ರವಾಹ ಭೀತಿ

0
Spread the love

ವಿಜಯನಗರ: ರಾಜ್ಯದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಬಹುತೇಕ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ವಿಜಯನಗರ ಜಿಲ್ಲೆಯಲ್ಲಿ ರಸ್ತೆ, ಭತ್ತದ ಗದ್ದೆಗಳು ಜಲಾವೃತವಾದ ಪರಿಣಾಮ ಮಕರಬ್ಬಿ-ಬ್ಯಾಲಾಹುಣಸೆ ಗ್ರಾಮದ ರಸ್ತೆ ಸಂಪೂರ್ಣ ಬಂದ್ ಆಗಿದೆ. ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನಲ್ಲಿರೋ ಬರುವ ಗ್ರಾಮಗಳಾಗಿದ್ದು, ತುಂಗಭದ್ರಾ ಜಲಾಶಯದ ಹಿನ್ನೀರು ಪ್ರದೇಶಗಳಲ್ಲಿ ಸಂಕಷ್ಟ ಎದುರಾಗಿದೆ. ಹತ್ತಾರು ಎಕರೆ ಭತ್ತದ ಜಮೀನಿಗೆ ನೀರು ನುಗ್ಗಿ ಭತ್ತದ ಗದ್ದೆಗಳು ಸಂಪೂರ್ಣ ಜಲಾವೃತಗೊಂಡಿದೆ.

Advertisement

ತುಂಗಭದ್ರಾ ಡ್ಯಾಂನಿಂದ 1.58 ಲಕ್ಷ ಕ್ಯುಸೆಕ್‌ ನೀರು ಹರಿದು ಬರ್ತಿದೆ. ಜಲಾಶಯ‌ ಭರ್ತಿಯಾದ ಹಿನ್ನೆಲೆ ಅಷ್ಟೇ ಪ್ರಮುಖ ಪ್ರಮಾಣದ ನೀರು ನದಿಗೆ ಬಿಡಲಾಗುತ್ತಿದೆ. ಅದಲ್ಲದೆ ನದಿಗೆ ಅಪಾರ ಪ್ರಮಾಣದ ನೀರು ಹರಿಬಿಟ್ಟಿರೋ ಹಿನ್ನೆಲೆ ನದಿಪಾತ್ರದ 22 ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದ್ದು, ಟಿಬಿ ಡ್ಯಾಂ ಮಂಡಳಿ ವಿಜಯನಗರ ಜಿಲ್ಲಾಡಳಿತದಿಂದ ಹೈ‌ ಅಲರ್ಟ್ ಘೋಷಣೆ ಮಾಡಿದೆ. ಯಾವುದೇ ಕ್ಷಣದಲ್ಲಿಯಾದ್ರೂ 2 ಲಕ್ಷ ಕ್ಯೂಸೆಕ್ ಗಿಂತಲೂ ಹೆಚ್ಚಿನ ನೀರು ನದಿ ಪಾತ್ರಕ್ಕೆ ಹರಿಬಿಡಲಾಗುವುದು. ಆದ್ದರಿಂದ ಯಾರು ಕೂಡಾ ನದಿ ಪಾತ್ರಕ್ಕೆ ಇಳಿಯಬಾರದು ಅಂತಾ ಎಚ್ಚರಿಕೆ ನೀಡಿದ್ದಾರೆ.

 


Spread the love

LEAVE A REPLY

Please enter your comment!
Please enter your name here