ಮಂಡ್ಯ:- ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ದಳವಾಯಿಕೋಡಿಹಳ್ಳಿ ಗ್ರಾಮದಲ್ಲಿ ಯುವಕರ ಮೇಲೆ ಡೆಡ್ಲಿ ಅಟ್ಯಾಕ್ ನಡೆದಿದೆ.
Advertisement
ಈ ಮೂಲಕ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೆ ಲಾಂಗು, ಮಚ್ಚು ಝಳಫಿಸಿದೆ. ಲಾಂಗು, ಮಚ್ಚು ಹಿಡಿದು ದುಷ್ಕರ್ಮಿಗಳಿಂದ ಇಬ್ಬರು ಯುವಕರ ಮೇಲೆ ಅಟ್ಯಾಕ್ ನಡೆದಿದೆ. ಘಟನೆಯಲ್ಲಿ ದುಷ್ಕರ್ಮಿಗಳಿಂದ ಕಾಂತ(28) ಎಂಬ ಯುವಕ ಭೀಕರ ಹತ್ಯೆ ನಡೆದಿದ್ದು, ಮತ್ತೊಬ್ಬನ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿ ಆರೋಪಿ ಪರಾರಿ ಆಗಿದ್ದಾನೆ.
ಗಾಯಾಳು ಕುಮಾರ್ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಲಾಗಿದೆ. ಘಟನೆಯಿಂದ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣ ಆಗಿದ್ದು, ಸ್ಥಳಕ್ಕೆ ಎಸ್ಪಿ ಸೇರಿ ಪೊಲೀಸ್ ಅಧಿಕಾರಿಗಳ ಭೇಟಿ ಪರಿಶೀಲನೆ ಮಾಡಿದ್ದಾರೆ.
ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.