ಬೆಂಗಳೂರು:- ತಾಲೂಕಿನ ಮರಸೂರು ಬಳಿ ರಸ್ತೆ ದಾಟುತ್ತಿದ್ದ ಯುವಕನಿಗೆ ಕ್ಯಾಂಟರ್ ಡಿಕ್ಕಿ ಹೊಡೆದು ಆತ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಿನ್ನೆ ರಾತ್ರಿ ಜರುಗಿದೆ.
Advertisement
ಡಿಕ್ಕಿ ಹೊಡೆದು ಕ್ಯಾಂಟರ್ ಚಾಲಕ ಪರಾರಿ ಆಗಿದ್ದಾನೆ. ಘಟನೆ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಲಬುರಗಿ ಮೂಲದ ಆಕಾಶ್, ಆನೇಕಲ್ ಚಂದಾಪುರ ಮುಖ್ಯ ರಸ್ತೆಯ ಬಾರ್ ಒಂದರಲ್ಲಿ ವಾಚ್ ಮ್ಯಾನ್ ಆಗಿದ್ದ ತಂದೆ ನೋಡಲು ಬಂದಿದ್ದ. ಅದರಂತೆ ತಂದೆ ಮಾತನಾಡಿಸಿಕೊಂಡು ರಸ್ತೆ ದಾಟಲು ಮುಂದಾಗಿದ್ದ ಸಂದರ್ಭದಲ್ಲಿ ವೇಗವಾಗಿ ಬಂದ ಕ್ಯಾಂಟರ್ ವಾಹನ ಡಿಕ್ಕಿ ಹೊಡೆದು ದುರ್ಘಟನೆ ನಡೆದಿದೆ. ಎಸ್ಕೇಪ್ ಆಗಿರುವ ಟ್ಯಾಕ್ಟರ್ ಚಾಲಕನಿಗೆ ಸೂರ್ಯನಗರ ಪೊಲೀಸರ ಹುಡುಕಾಟ ನಡೆಸಿದ್ದಾರೆ.