Crime News: ಹಾಡಹಗಲೇ ಯುವಕನ ಬರ್ಬರ ಕೊಲೆ; ಬೆಚ್ಚಿ ಬಿದ್ದ ಬೆಂಗಳೂರು ಮಂದಿ!

0
Spread the love

ಬೆಂಗಳೂರು:- ಹಾಡಹಗಲೇ ಯುವಕನ ಬರ್ಬರ ಕೊಲೆ ನಡೆದಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ಜರುಗಿದೆ.

Advertisement

ಶೇಷಾದ್ರಿಪುರ ಪೊಲೀಸ್ ಠಾಣೆ ರೌಡಿಶೀಟರ್ ಆಗಿದ್ದ ಅಜಿತ್, ಇಂದು ಮಧ್ಯಾಹ್ನ 4:15 ರ ವೇಳೆಗೆ ಮನೆಯಿಂದ ಊಟ ಮುಗಿಸಿ ಹೊರಬಂದಿದ್ದ. ಈ ವೇಳೆ ಅಟ್ಯಾಕ್ ಮಾಡಿರುವ ಹಂತಕರ ಗ್ಯಾಂಗ್, ಮಾರಕಾಸ್ತ್ರ ಬೀಸಿದ ರಭಸಕ್ಕೆ ಅಜಿತ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸಧ್ಯ ಮೃತದೇಹ ಮರಣೋತ್ತರ ಪರೀಕ್ಷೆಗೆ ಬೋರಿಂಗ್​ ಆಸ್ಪತ್ರೆಗೆ ರವಾನೆ ಮಾಡಲಾಗಿದೆ

ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೋಷಕರು, ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಘಟನಾ ಸ್ಥಳಕ್ಕೆ ಕೇಂದ್ರ ವಿಭಾಗ ಡಿಸಿಪಿ ಶೇಖರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಘಟನೆ ಕುರಿತು ಮಾತನಾಡಿದ, ‘ಕೇಂದ್ರ ವಿಭಾಗದ ಡಿಸಿಪಿ ಶೇಖರ್, ‘ಮೃತ ಅಜಿತ್ ಕುಮಾರ್ ಎಂಬ 27 ವಯಸ್ಸಿನ ವ್ಯಕ್ತಿಯ ಕೊಲೆ ನಡೆದಿದೆ. ಈತ ಕೊಲೆ ಪ್ರಕರಣದ ಆರೋಪಿಯಾಗಿದ್ದು, 2022ರಲ್ಲಿ ಕೊಲೆ ಕೇಸ್​ನಲ್ಲಿ ಜೈಲಿಗೆ ಹೋಗಿದ್ದ. ಅದೇ ವಿಚಾರಕ್ಕೆ ಕೊಲೆ ನಡೆದಿದೆ ಎಂದು ಹೇಳಲಾಗುತ್ತಿದೆ. ಬ್ಲಡ್ ಬ್ಯಾಂಕ್​ವೊಂದರಲ್ಲಿ ಇತ ಕೆಲಸ ಮಾಡ್ತಿದ್ದ. ಸದ್ಯ ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದರು.


Spread the love

LEAVE A REPLY

Please enter your comment!
Please enter your name here